ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾಶ್ರೀ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Last Updated 10 ಅಕ್ಟೋಬರ್ 2022, 8:32 IST
ಅಕ್ಷರ ಗಾತ್ರ

ಚಿತ್ರದುರ್ಗ: ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ಅ.21ರವರೆಗೆ ವಿಸ್ತರಣೆಯಾಗಿದೆ.

ಬಂಧನದ ಅವಧಿ ಅಂತ್ಯಗೊಂಡಿದ್ದರಿಂದ ಸೋಮವಾರ ಅವರನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ನ್ಯಾಯಾಂಗದ ಅವಧಿಯನ್ನು ವಿಸ್ತರಿಸಿದರು.

ಶಿವಮೂರ್ತಿ ಮುರುಘಾ ಶರಣರನ್ನು ಸೆ.1ರಂದುಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT