ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಮಠದ ಶಿವಮೂರ್ತಿ ಶರಣರ ಆದೇಶ; ಭರತ್‌ಕುಮಾರ್‌ ಸೇವೆಯಿಂದ ಬಿಡುಗಡೆ

Published 8 ಡಿಸೆಂಬರ್ 2023, 13:35 IST
Last Updated 8 ಡಿಸೆಂಬರ್ 2023, 13:35 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುರುಘಾ ಮಠದ ಎಸ್‌ಜೆಎಂ ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿ ಆಗಿದ್ದ ಉದ್ಯಮಿ ಎಂ.ಭರತ್‌ಕುಮಾರ್‌ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.

‘ಎಸ್‌ಜೆಎಂ ವಿದ್ಯಾಪೀಠ ಹಾಗೂ ಎಸ್‌ಜೆಎಂ ವಿಶ್ವವಿದ್ಯಾಲಯದ ಕರ್ತವ್ಯಗಳಿಂದ ಬಿಡುಗಡೆಗೊಳಿಸಿ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಶರಣರು ಶುಕ್ರವಾರ ಆದೇಶಿಸಿದ್ದಾರೆ’ ಎಂದು ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುರುಘಾ ಮಠದ ಅಧೀನ ಸಂಸ್ಥೆಯಾದ ಎಸ್‌ಜೆಎಂ ವಿದ್ಯಾಪೀಠದ ಕಾರ್ಯನಿರ್ವಹಣಾಧಿಕಾರಿಯಾಗಿ ಉದ್ಯಮಿ ಭರತ್‍ಕುಮಾರ್ ಅವರನ್ನು 2022ರ ಡಿ.2ರಂದು ನೇಮಕ ಮಾಡಲಾಗಿತ್ತು. ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡುವುದಕ್ಕೂ ಕೆಲವೇ ದಿನಗಳ ಮುನ್ನ ಈ ನೇಮಕಾತಿ ನಡೆದಿತ್ತು.

ಎಂಜಿನಿಯರಿಂಗ್‌ನಲ್ಲಿ ಉನ್ನತ ವ್ಯಾಸಂಗ ಮಾಡಿರುವ ಎಂ.ಭರತ್‌ಕುಮಾರ್‌ ಅಮೆರಿಕದಲ್ಲಿ ನೆಲೆಸಿದ್ದರು. ಅಮೆರಿಕ ಸೇರಿ ಹಲವು ದೇಶಗಳಲ್ಲಿ ಉದ್ಯಮ ಹೊಂದಿರುವ ಇವರು, ಶಿವಮೂರ್ತಿ ಶರಣರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದರು. ಶರಣ ಸಂಸ್ಕೃತಿ ಉತ್ಸವದ ಶೂನ್ಯ ಪೀಠಾರೋಹಣದ ಸಂದರ್ಭದಲ್ಲಿ ನಡೆದ ಬೆಳವಣಿಗೆಯಲ್ಲಿ ಇವರ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT