ಮುರುಘಾ ಶ್ರೀ ಪ್ರಕರಣ | ಸೌಭಾಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಲು ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಹಾಗೂ ಪಿತೂರಿ ನಡೆಸಿದ ಆರೋಪದಡಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ಪೊಲೀಸ್ ತಂಡ ರಚಿಸಲಾಗಿತ್ತು. ದಾವಣಗೆರೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಬಂಧನ ಭೀತಿ ಎದುರಿಸುತ್ತಿದ್ದ ಸೌಭಾಗ್ಯ, ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾ ಮಾಡಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಸೌಭಾಗ್ಯ ಅವರ ಪತಿ ಎಸ್.ಕೆ. ಬಸವರಾಜನ್, ಶಿಕ್ಷಕ ಬಸವರಾಜೇಂದ್ರ, ಛಾಯಾಗ್ರಾಹಕ ಮಯೂರ ಬಂಧಿತರಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.