ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರಿನಲ್ಲಿದ್ದ ಇವರನ್ನು ಪೊಲೀಸರು ವಿಚಾರಣೆಗಾಗಿ ಶುಕ್ರವಾರ ನಸುಕಿನಲ್ಲಿ ಚಿತ್ರದುರ್ಗಕ್ಕೆ ಕರೆತಂದಿದ್ದಾರೆ. ಮಹಿಳಾ ಪೊಲೀಸರು ಇವರನ್ನು ಇಡಿ ದಿನ ವಿಚಾರಣೆ ನಡೆಸಿದ್ದಾರೆ. ಶರಣರ ವಿರುದ್ಧ ಹೇಳಿಕೆ ನೀಡುವಂತೆ ಮಠದಲ್ಲಿ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡಿದ್ದ ತನ್ನ ಪುತ್ರಿಯರಿಗೆ ಕುಮ್ಮಕ್ಕು ನೀಡಿದ ಆರೋಪ ಈ ಮಹಿಳೆಯ ಮೇಲಿದೆ.

ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ನೀಡಿದ ದೂರು ಆಧರಿಸಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಎಂಬುವರನ್ನು ಬಂಧಿಸಿದ್ದ ಪೊಲೀಸರು, ಶುಕ್ರವಾರ ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು. ಬಸವರಾಜನ್ ಪತ್ನಿ ಸೌಭಾಗ್ಯ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಸ್ಥಳ ಮಹಜರು:

ಶಿವಮೂರ್ತಿ ಶರಣರ ಫೋಟೊಗಳು ಕಳವಾಗಿರುವ ಮಠದ ರಾಜಾಂಗಣದ ಸ್ಥಳ ಮಹಜರು ಶುಕ್ರವಾರ ನಡೆಯಿತು. ಪೊಲೀಸ್ ವಶದಲ್ಲಿರುವ ಆರೋಪಿ ಶ್ರೀನಿವಾಸ್ ಎಂಬುವರನ್ನು ಮಠಕ್ಕೆ ಕರೆದೊಯ್ದ ತನಿಖಾ ತಂಡ ಸ್ಥಳ ಮಹಜರು ಮಾಡಿತು.

ಜಾಮೀನು ಅರ್ಜಿ ವಜಾ:

ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಇಬ್ಬರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.

ಆರೋಪಿಗಳಾದ ಮಹಾಲಿಂಗ ಮತ್ತು ಕರಿಬಸಪ್ಪ ಎಂಬುವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.