ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲು ರದ್ದು: ಬೀದಿಗಿಳಿದ ಮುಸ್ಲಿಮರು

Last Updated 28 ಮಾರ್ಚ್ 2023, 18:19 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುಸ್ಲಿಂ ಸಮುದಾಯಕ್ಕಿದ್ದ ಶೇ 4ರಷ್ಟು ಮೀಸಲಾತಿ ಸೌಲಭ್ಯವನ್ನು ರದ್ದುಪಡಿಸಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಒನಕೆ ಓಬವ್ವ ವೃತ್ತದತ್ತ ಮೆರವಣಿಗೆ ಮೂಲಕ ತೆರಳಲು ಹಾಗೂ ಬಹಿರಂಗ ಸಭೆ ನಡೆಸುವ ವಿಚಾರದಲ್ಲಿ ಪ್ರತಿಭಟನಕಾರರು ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವುದರಿಂದ ಇತರ ಹಿಂದುಳಿದ
ವರ್ಗ (ಒಬಿಸಿ) ಪ್ರವರ್ಗ ‘2ಬಿ’ ಅಡಿಯಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿತ್ತು. ವಿವಿಧ ಆಯೋಗಗಳು ಮೀಸಲಾತಿಗೆ
ಪೂರಕ ವರದಿ ನೀಡಿದ್ದವು. ಆದರೂ ಮುಸ್ಲಿಮರ ಏಳ್ಗೆ ಸಹಿಸದ ಬಿಜೆಪಿ ಈ ಸೌಲಭ್ಯ ರದ್ದುಪಡಿಸಿದೆ ಎಂದು ಆರೋಪಿಸಿದರು.

ಈವರೆಗೆ ನೀಡಲಾಗಿದ್ದ ಮೀಸಲು ಸೌಲಭ್ಯವನ್ನು ಮುಂದುವರಿಸುವಂತೆ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು. ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್‌, ವಕೀಲ ಬಿ.ಕೆ. ರಹಮತ್‍ವುಲ್ಲಾ, ಎಸ್‌ಡಿಪಿಐ ಮುಖಂಡ ಜಾಕಿರ್ ಹುಸೇನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT