ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ | 'ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ'

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ ಆಗ್ರಹ
Published : 4 ಆಗಸ್ಟ್ 2024, 15:45 IST
Last Updated : 4 ಆಗಸ್ಟ್ 2024, 15:45 IST
ಫಾಲೋ ಮಾಡಿ
Comments

ಚಿತ್ರದುರ್ಗ: ಮೈಸೂರು ಚಲೋ ಪಾದಯಾತ್ರೆ ಮುಗಿಯುವುದರೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ ಆಗ್ರಹಿಸಿದರು.

ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ನಗರದ ಒನಕೆ ಓಬವ್ವ ವೃತ್ತದಿಂದ ಭಾನುವಾರ ಪಕ್ಷದ ಮುಖಂಡರು, ಕಾರ್ಯಕರ್ತರ ಜತೆ ತೆರಳುವ ಮುನ್ನ ಅವರು ಮಾತನಾಡಿದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ, ಮುಡಾ ನಿವೇಶನ ಹಗರಣದಲ್ಲಿ ಮುಖ್ಯಮಂತ್ರಿ ಸಿಲುಕಿದ್ದಾರೆ. ಆದರೂ ಬಂಡತನಿಂದ ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ಅನ್ಯ ಉದ್ದೇಶಕ್ಕೆ ಬಳಸಲಾಗಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡದಿದ್ದರೆ ರಾಜ್ಯದ ಜನ ನಿಮ್ಮನ್ನು ಕ್ಷಮಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ವಿಧಾನಸಭೆ ಅಧಿವೇಶನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚಿಸಲು ಸ್ಪೀಕರ್‌ ಯು.ಟಿ.ಖಾದರ್‌ ಅವಕಾಶ ಕೊಡಲಿಲ್ಲ. ಗ್ಯಾರಂಟಿ ಯೋಜನೆಗಳಿಗಾಗಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಮತದಾರರು ಸಹಿಸುವುದಿಲ್ಲ’ ಎಂದು ಹೇಳಿದರು.

‘ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು, ಕಾರ್ಯಕರ್ತರು ಮೈಸೂರು ಚಲೋದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಬಿಡದಿಯಲ್ಲಿ ಪಾದಯಾತ್ರೆಗೆ ಜತೆಯಾಗಲಿದ್ದೇವೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್‌ ಸಿದ್ದಾಪುರ, ಸಂಪತ್‌ ಕುಮಾರ್‌, ಖಜಾಂಚಿ ಮಾಧುರಿ ಗಿರೀಶ್‌, ನಗರ ಮಂಡಲ ಅಧ್ಯಕ್ಷ ನವೀನ್‌ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT