ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದರಿ ಕ್ಷೇತ್ರವಾಗಿಸುವ ಕನಸು: ಎನ್.ವೈ. ಗೋಪಾಲಕೃಷ್ಣ

Published 23 ಏಪ್ರಿಲ್ 2023, 4:34 IST
Last Updated 23 ಏಪ್ರಿಲ್ 2023, 4:34 IST
ಅಕ್ಷರ ಗಾತ್ರ

ಮೊಳಕಾಲ್ಮುರು: ‘ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿಸುವ ಕನಸು ಹೊಂದಿದ್ದು, ಇದನ್ನು ನನಸು ಮಾಡಲು ಮತದಾರರು ಅವಕಾಶ ನೀಡಬೇಕು’ ಎಂದು ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಗೋಪಾಲಕೃಷ್ಣ ಹೇಳಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಘಟಪರ್ತಿ, ಹೊನ್ನೂರು, ಮನ್ನೇಕೋಟೆ ಗ್ರಾಮಗಳಲ್ಲಿ ಶನಿವಾರ ವಿಧಾನಸಭಾ ಚುನಾವಣೆ ಪ್ರಚಾರ ಸಭೆಗಳನ್ನು ನಡೆಸಿ ಅವರು ಮಾತಣಾಡಿದರು.

‘ತುಂಗಭದ್ರಾ ಹಿನ್ನೀರು ಕುಡಿಯುವ ನೀರಿನ ಯೋಜನೆಯನ್ನು ಶೀಘ್ರ ಸಾಕಾರ ಮಾಡಿಸಲಾಗುವುದು.ಕೈಗಾರಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. 20 ವರ್ಷಗಳ ರಾಜಕೀಯ ಜೀವನವನ್ನು ಚೌಕಟ್ಟಿನಲ್ಲಿ ಇಟ್ಟುಕೊಂಡು ಕೆಲಸ ಮಾಡಿದ್ದೇನೆ. ಭರವಸೆ ನೀಡಿ ಮರೆಯುವ ಕೆಲಸ ಮಾಡಿಲ್ಲ’ ಎಂದರು.

ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಮುಖಂಡರಾದ ಬಿ. ಯೋಗೇಶ್ ಬಾಬು, ಬೇಡರೆಡ್ಡಿಹಳ್ಳಿ ನಾಗೇಶ್ ರೆಡ್ಡಿ, ಬಾಲರಾಜ್, ಸಿ.ಬಿ. ಮೋಹನ್, ಟಿ. ಚಂದ್ರಣ್ಣ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT