ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ: ನಾಗಮೋಹನ್‍ದಾಸ್‌ ವರದಿ ಜಾರಿಗೆ ಆಗ್ರಹ

Last Updated 17 ಮೇ 2022, 3:58 IST
ಅಕ್ಷರ ಗಾತ್ರ

ಚಳ್ಳಕೆರೆ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್‍ ಅವರ ಎಸ್ಸಿ-ಎಸ್ಟಿ ಮೀಸಲಾತಿ ವರದಿಯನ್ನು ಯಥಾ
ವತ್ತಾಗಿ ಜಾರಿಗೊಳಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಆಗ್ರಹಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜನಹಳ್ಳಿಯ ವಾಲ್ಮೀಕಿ ಪೀಠದ ಪ್ರಸನ್ನಾಂದಪುರಿ ಸ್ವಾಮೀಜಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಮೀಸಲಾತಿವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ.ಮಹಾರಾಷ್ಟ್ರ, ತಮಿಳುನಾಡು ಮುಂತಾದ ಹೊರ ರಾಜ್ಯದ ಮಾದರಿಯಲ್ಲಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ಮೀಸಲಾತಿ ನೀಡಬೇಕು. ಇಲ್ಲದೆ ಹೋದರೆ ಮೀಸಲಾತಿಗೆ ರಾಜ್ಯದಲ್ಲಿ ನಿರಂತರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಮೇ 20ರಂದು ನಡೆಯಲಿರುವ ಎಸ್ಸಿ-ಎಸ್ಟಿ ಮೀಸಲಾತಿ ಹೋರಾಟವನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಮನವಿ ಮಾಡಿದರು.

ನಗರಸಭೆ ಮಾಜಿ ಸದಸ್ಯ ಜಿ.ಟಿ. ಗೋವಿಂದರಾಜ, ‘ಜನ ಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.

ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ, ಉಪಾಧ್ಯಕ್ಷೆ ಮಂಜುಳಾ ಆರ್. ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಪ್ರಸನ್ನಕುಮಾರ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶಮೂರ್ತಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಟಿ. ವೀರಭದ್ರಸ್ವಾಮಿ, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಡಿ.ಟಿ. ಜಗನ್ನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT