ನ್ಯಾಕ್ ಪ್ರಾಯೋಗಿಕ ಅಧ್ಯಯನಕ್ಕೆ ಆಯ್ಕೆ

7

ನ್ಯಾಕ್ ಪ್ರಾಯೋಗಿಕ ಅಧ್ಯಯನಕ್ಕೆ ಆಯ್ಕೆ

Published:
Updated:

ಚಿತ್ರದುರ್ಗ: ಮಾಲ್ಯಮಾಪನ ಹಾಗೂ ಮಾನ್ಯತೆಗೆ ಸಂಬಂಧಿಸಿದಂತೆ ಮಾಡಿರುವ ನಿಯಮಾವಳಿ ಬದಲಾವಣೆ ಕುರಿತು ನ್ಯಾಕ್ ಇಲ್ಲಿನ ಎಸ್‌ಜೆಎಂ ದಂತ ಮತ್ತು ಔಷಧ ಈ ಎರಡೂ ಮಹಾವಿದ್ಯಾಲಯಗಳನ್ನು ಪ್ರಾಯೋಗಿಕ ಅಧ್ಯಯನಕ್ಕೆ ಆಯ್ಕೆ ಮಾಡಿಕೊಂಡಿದೆ.

ಎರಡೂ ವಿದ್ಯಾಲಯಗಳು ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟಿದ್ದು, ರಾಜ್ಯದಲ್ಲಿ ನಡೆಯಲಿರುವ ಪ್ರಾಯೋಗಿಕ ಅಧ್ಯಯನಕ್ಕೆ ಸಂಬಂಧಿಸಿದಂತೆ ಎಸ್‌ಜೆಎಂ ವಿದ್ಯಾಪೀಠದ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ವಿದ್ಯಾಪೀಠದ ಅಧ್ಯಕ್ಷ ಶಿವಮೂರ್ತಿ ಮುರುಘಾ ಶರಣರು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಪರಿಷತ್ತಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಅಧ್ಯಯನದಿಂದ ನಡೆದ ಮಾಹಿತಿ ಆಧರಿಸಿ ನ್ಯಾಕ್ ದೇಶದಾದ್ಯಂತ ಇರುವ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಗಳು ಮತ್ತು ಮಹಾವಿದ್ಯಾಲಯಗಳ ಮೌಲ್ಯಮಾಪನ ಮತ್ತು ಮಾನ್ಯತೆಗೆ ಸಂಬಂಧಿಸಿದಂತೆ ಪುನಾರಚಿತ ನಿಯಮಾವಳಿಗಳನ್ನು ಬಿಡುಗಡೆ ಮಾಡಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !