ಬುಧವಾರ, ಫೆಬ್ರವರಿ 26, 2020
19 °C

ದೇಶಕ್ಕೆ ಬೆಂಕಿ ಹಚ್ಚುವ ಕಾಂಗ್ರೆಸ್: ಕಟೀಲು ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಪೌರತ್ವ ಮಸೂದೆಗೆ ವಿರೋಧ ವ್ಯಕ್ತಪಡಿಸುವ ನೆಪದಲ್ಲಿ ದೇಶಕ್ಕೆ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಮುರುಘಾ ಮಠಕ್ಕೆ ಸೋಮವಾರ ಭೇಟಿ ನೀಡಿದ ಅವರು ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಈಗಾಗಲೇ ಮೂರು ರೀತಿಯ ಸಮಸ್ಯೆ ಎದುರಿಸುತ್ತಿದೆ. ಬೌದ್ಧಿಕ, ವೈಚಾರಿಕ, ಸಂಘಟನಾತ್ಮಕವಾಗಿ ಕಾಂಗ್ರೆಸ್ ದಿವಾಳಿಯಾಗಿದೆ. ಬ್ರಿಟಿಷರು ಅನುಸರಿಸುತ್ತಿದ್ದ ಒಡೆದಳುವ ನೀತಿಯನ್ನು ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಾಲಿಸಿಕೊಂಡು ಬಂದಿತ್ತು. ಪೌರತ್ವ ತಿದ್ದುಪಡಿ ಮಸೂದೆಯಿಂದ ಮುಸ್ಲಿಂ ಸಮುದಾಯದವರಿಗೆ ಯಾವುದೇ ತೊಂದರೆ ಇಲ್ಲ ಎಂದರು.

ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗೆ ಪರಮಾಧಿಕಾರ ಇದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಯಾವ ಖಾತೆ ಕೊಡಬೇಕು ಎಂಬುದನ್ನು ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ. ಬಳಿಕ ಎಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ. ಎಲ್ಲ ಜಿಲ್ಲೆಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು