ನಂದಿನಿ ದೇವಿ ನೂತನ ಸಿಇಒ

ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಗೆ ಡಾ.ಕೆ.ನಂದಿನಿ ದೇವಿ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಟಿ.ಯೋಗೇಶ್ ಅವರು ಜೂನ್ 4ರಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದರು. ಐದು ತಿಂಗಳ ಕಾಲ ಜಿಲ್ಲಾ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.
ನಂದಿನಿ ದೇವಿ ಅವರು ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗಾಧಿಕಾರಿಯಾಗಿದ್ದರು. ಚಿತ್ರದುರ್ಗದಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.