ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ನಾಥೂರಾಮ್ ಗೋಡ್ಸೆ ಚಿತ್ರ ಪ್ರದರ್ಶನ: ದೂರು ದಾಖಲು

Published 11 ಅಕ್ಟೋಬರ್ 2023, 6:54 IST
Last Updated 11 ಅಕ್ಟೋಬರ್ 2023, 6:54 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿ ಅ.8ರಂದು ನಡೆದ ಹಿಂದೂ‌ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಗಾಂಧಿ ಹಂತಕ‌ ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶಿಸಿದ ಆರೋಪದ ಮೇರೆಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ನಗರದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇರೆಗೆ ಎಫ್ಐಆರ್ ದಾಖಲಾಗಿದೆ. ಎಫ್ಐಆರ್‌ನಲ್ಲಿ ಆರೋಪಿಗಳ ಹೆಸರು ಉಲ್ಲೇಖವಾಗಿಲ್ಲ.

'ಕಾನೂನು ಸುವ್ಯವಸ್ಥೆ ಹಾಳು ಮಾಡುವ ಉದ್ದೇಶದಿಂದ ಗೋಡ್ಸೆ ಚಿತ್ರ ಪ್ರದರ್ಶಿಸಲಾಗಿದೆ. ಶಾಂತಿ ಭಂಗ, ಕೋಮು ಸೌಹಾರ್ದತೆಗೆ ದಕ್ಕೆ ಉಂಟಾಗುವ ಸಾಧ್ಯತೆ ಇದೆ. ಆರೋಪಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು' ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ‌ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಭಾನುವಾರ ಅದ್ದೂರಿಯಾಗಿ ನಡೆದಿತ್ತು.

ಚಳ್ಳಕೆರೆ ಗೇಟ್ ಸಮೀಪದ ಜೈನಧಾಮದಿಂದ ಚಂದ್ರವಳ್ಳಿ ಕೆರೆಯವರೆಗೆ ಸಾಗಿದ ಶೋಭಾಯಾತ್ರೆಯಲ್ಲಿ ನಾಥೂರಾಮ್ ಗೋಡ್ಸೆ, ಸಾವರ್ಕರ್ ಹಾಗೂ ಬಜರಂಗದಳದ ಕಾರ್ಯಕರ್ತ ಹರ್ಷ ಭಾವಚಿತ್ರಗಳು ಕಾಣಿಸಿಕೊಂಡಿದ್ದವು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT