ಸಿರಿಗೆರೆ: ಬೆಂಗಳೂರಿನ ಭಾರತೀಯ ಅಮೆಚ್ಯುರ್ ಕಬ್ಬಡಿ ಫೆಡರೇಷನ್ ಆಶ್ರಯದಲ್ಲಿ ಯಶವಂತಪುರದ ಮಾರುತಿ ಕಬಡ್ಡಿ ಕ್ಲಬ್ನಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಮಹಿಳಾ ಸಬ್ ಜ್ಯೂನಿಯರ್ ಕಬಡ್ಡಿ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಇಲ್ಲಿನ ನೀಲಾಂಬಿಕಾ ಬಾಲಿಕಾ ಪ್ರೌಢಶಾಲೆಯ ಬಿ.ಸೃಷ್ಟಿ ಮತ್ತು ಎಸ್. ಶಿವಾನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿದ್ಯಾರ್ಥಿಗಳ ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 90 ಬಾಲಕಿಯರು ಭಾಗವಹಿಸಿದ್ದರು. ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿದ 12 ಜನರ ತಂಡವನ್ನು ರಾಷ್ಟ್ರಮಟ್ಟಕ್ಕೆ ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಸಿರಿಗೆರೆಯ ಈ ಇಬ್ಬರು ಬಾಲಕಿಯರು ಸ್ಥಾನ ಗಳಿಸಿದ್ದಾರೆ.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಬಾಲಕಿಯರನ್ನು ತರಳಬಾಳು ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೀರಣ್ಣ ಜತ್ತಿ, ಆಡಳಿತಾಧಿಕಾರಿ ಎಚ್.ವಿ. ವಾಮದೇವಪ್ಪ, ಮುಖ್ಯ ಶಿಕ್ಷಕ ಸೋಮಶೇಖರ್, ದೈಹಿಕ ಶಿಕ್ಷಣ ಶಿಕ್ಷಕಿ ಬಿ.ಎಸ್. ರೇಖಾ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.