ನಾಯಕನಹಟ್ಟಿ: ಮನ್ನೇಕೋಟೆ ಗ್ರಾಮ ಪಂಚಾಯಿತಿಯಲ್ಲಿ ಒಂದೇ ಹುದ್ದೆಯಲ್ಲಿ ಇಬ್ಬರು ಪಿಡಿಒ ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಹೇಳಿದರು.

ತಳಕು ಹೋಬಳಿಯ ಮನ್ನೇಕೋಟೆ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೋಮವಾರ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

‘ತಳಕು ಹೋಬಳಿಯ ಮನ್ನೇಕೋಟೆ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಹೆರಿಗೆ ರಜೆಯ ಮೇಲೆ ತೆರಳಿದ್ದರು. ಆಡಳಿತ ನಿರ್ವಹಣೆಗೆ ಹೆಚ್ಚುವರಿಯಾಗಿ ಮತ್ತೋರ್ವ ಅಧಿಕಾರಿಯನ್ನು ನೇಮಿಸಲಾಗಿತ್ತು. ಕಳೆದ 20 ದಿನಗಳ ಹಿಂದೆ ಖಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒ ಹೆರಿಗೆ ರಜೆ ಮುಗಿಸಿಕೊಂಡು ಬಂದಿದ್ದು, ಅವರೂ ಇಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒಂದೇ ಜಾಗದಲ್ಲಿ ಇಬ್ಬರು ಪಿಡಿಒಗಳು ಕರ್ತವ್ಯ ನಿರ್ವಹಿಸುತ್ತಿರುವುದನ್ನು ನೋಡಿದರೆ ವ್ಯವಸ್ಥೆಯ ಲೋಪ ಅರ್ಥವಾಗುತ್ತದೆ’ ಎಂದು ದೂರಿದರು.

ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಒ ವಾರದಲ್ಲಿ ಎರಡು ದಿನ ಮಾತ್ರ ಕಚೇರಿಗೆ ಬರುತ್ತಾರೆ. ಇದರಿಂದ ಸಾರ್ವಜನಿಕರಿಗೆ, ರೈತರಿಗೆ, ಉದ್ಯೋಗ ಖಾತ್ರಿ ಕೂಲಿಕಾರ್ಮಿಕರಿಗೆ ತೊಂದರೆಯಾಗುತ್ತಿದೆ. ಯಾವ ಅಧಿಕಾರಿಯ ಬಳಿ ಕೆಲಸ ಮಾಡಿಸಿಕೊಳ್ಳಬೇಕು ಎಂಬ ಗೊಂದಲದಲ್ಲಿ ಸಾರ್ವಜನಿಕರಿದ್ದಾರೆ. ರೈತ ಸಂಘದ ಪದಾಧಿಕಾರಿಗಳು 20 ದಿನಗಳ ಹಿಂದೆಯೇ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಕಣ್ಮಚ್ಚಿ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಜೊತೆಗೆ ಇಬ್ಬರು ಪಿಡಿಒಗಳ ಮಧ್ಯೆ ಪೈಪೋಟಿ ಏರ್ಪಟ್ಟಿದ್ದು, ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು ಎಂದರು.

ರೈತ ಸಂಘದ ಪದಾಧಿಕಾರಿಗಳಾದ ಮರ್ಲಹಳ್ಳಿ ರವಿಕುಮಾರ್, ಪ್ರಶಾಂತ್ಕುಮಾರ್, ಮಲ್ಲಸಮುದ್ರ ಗಂಗಾಧರ, ಡಿ.ಚಂದ್ರಶೇಖರ್ನಾಯ್ಕ್, ರಾಮಾನಾಯ್ಕ, ಕೆ.ಟಿ. ಕಪಿಲೆ ತಿಪ್ಪೇಸ್ವಾಮಿ, ಓಬ್ಯಾನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.