ನಾಯಕನಹಟ್ಟಿ: ‘ಗ್ರಾಮೀಣ ಪ್ರದೇಶದಲ್ಲಿ ಕಳ್ಳತನಕ್ಕಿಂತ ಹೆಚ್ಚಿನ ಹಣವನ್ನು ಸೈಬರ್ ಪ್ರಕರಣಗಳಲ್ಲಿ ದೋಚಲಾಗುತ್ತಿದೆ. ಈ ಬಗ್ಗೆ ಗ್ರಾಮೀಣ ಪ್ರದೇಶದ ಜನ ಜಾಗೃತಿವಹಿಸಬೇಕು’ ಎಂದು ಡಿವೈಎಸ್ಪಿ ಸತ್ಯನಾರಾಯಣ ರಾವ್ ಎಚ್ಚರಿಕೆ ನೀಡಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗಳ ಕುಂದು–ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

‘ಗ್ರಾಮೀಣ ಜನರು ಮೊಬೈಲ್ ಬಳಸುವಾಗ ಎಚ್ಚರದಿಂದ ಇರಬೇಕು. ಯಾರಾದರೂ ಕರೆಮಾಡಿ ಒಟಿಪಿ ಕೇಳಿದರೆ ತಕ್ಷಣವೇ ಮನೆಯವರ ಗಮನಕ್ಕೆ ತರಬೇಕು. ಇಲ್ಲವಾದರೆ ಸಮೀಪದ ಪೊಲೀಸ್ ಠಾಣೆಗೆ ತಿಳಿಸಬೇಕು. ಇದರಿಂದ ಸೈಬರ್ ವಂಚನೆಯ ಜಾಲಕ್ಕೆ ಸಿಲುಕುವುದನ್ನು ತಪ್ಪಿಸಬಹುದು. ಸಾರ್ವಜನಿಕರು ನಾನಾ ಕಾರಣಗಳಿಂದ ಮನೆಗೆ ಬೀಗ ಹಾಕಿಕೊಂಡು ಹೋಗುವ ಸಂದರ್ಭದಲ್ಲಿ ಮನೆ ಮಾಲೀಕರು ಇಲಾಖೆ ತಿಳಿಸಿರುವ ಮೊಬೈಲ್ಗೆ ಮಾಹಿತಿ ನೀಡಬೇಕು. ಇದರಿಂದ ಆಯಾ ಬೀಟ್ ಪೊಲೀಸರು ಬಾಗಿಲು ಮುಚ್ಚಿದ ಮನೆಗಳ ಬಗ್ಗೆ ನಿಗಾವಹಿಸಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

‘ಮೆ 28ರಂದು ಬಕ್ರೀದ್ ಹಬ್ಬದ ಆಚರಣೆಯಿದೆ. ಸಹಿಷ್ಣುತೆಯಿಂದ ನಾವು ಬದುಕುವುದನ್ನು ಕಲಿಯಬೇಕು. ಯಾವುದೇ ಸಮಸ್ಯೆಗಳಿದ್ದರೆ ಪೊಲೀಸರ ಗಮನಕ್ಕೆ ತರಬೇಕು. ವಿವಾದಗಳಿದ್ದರೆ ಮಾತುಕತೆಗಳಿಂದ ಬಗೆಹರಿಸಿಕೊಳ್ಳಬೇಕು. ಎಲ್ಲ ಧರ್ಮಗಳು ತನ್ನದೆ ಆದ ರೀತಿಯಲ್ಲಿ ಹಬ್ಬಗಳನ್ನು ಆಚರಿಸುತ್ತವೆ. ಇವುಗಳಿಗೆ ಎಲ್ಲರೂ ಸಹಕಾರ ನೀಡಬೇಕು’ ಎಂದು ಪೊಲೀಸ್ವೃತ್ತ ನಿರೀಕ್ಷಕ ಹನುಮಂತಪ್ಪ ಎಂ.ಶಿರೇಹಳ್ಳಿ ಹೇಳಿದರು.

‘ಗ್ರಾಮ ಪಂಚಾಯಿತಿಗಳು ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಪಿಎಸ್ಐ ಪಾಂಡುರಂಗ ತಿಳಿಸಿದರು.

ಪ.ಪಂ. ಸದಸ್ಯ ಸೈಯದ್ಅನ್ವರ್, ಮುಖಂಡರಾದ ಮಲ್ಲಣ್ಣ, ತಿಪ್ಪೇಸ್ವಾಮಿ, ಆರ್.ಶ್ರೀಕಾಂತ್, ಮುತ್ತಯ್ಯ, ಕೆ.ಎಂ.ಮಹಮ್ಮದ್ಯೂಸೂಪ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-44-1536692008

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.