ನಾಯಕನಹಟ್ಟಿ: ಹೋಬಳಿಯ ಹಲವೆಡೆಗಳಲ್ಲಿ ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮತ್ತು ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ.

ಶುಕ್ರವಾರ ಸಂಜೆ ಆರಂಭವಾದ ಬಿರುಗಾಳಿ ಸಹಿತ ಮಳೆಗೆ ನಾಯಕನಹಟ್ಟಿ ಪಟ್ಟಣದ ಚಳ್ಳಕೆರೆ ರಸ್ತೆಯ ದೊಡ್ಡಹಳ್ಳದ ಸಮೀಪವಿರುವ ಸಿಮೆಂಟ್ ಇಟ್ಟಿಗೆ ಫ್ಯಾಕ್ಟರಿಯ ಚಾವಣಿ ಹಾರಿಹೋಗಿದೆ. ಇದರ ಪರಿಣಾಮ 100ಕ್ಕೂ ಹೆಚ್ಚು ಸಿಮೆಂಟ್ ಚೀಲಗಳು ತೊಯ್ದಿವೆ.

ಸಮೀಪದಲ್ಲಿ ನಾಲ್ಕು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದರಿಂದ ನಾಯಕನಹಟ್ಟಿ, ಮನುಮೈನಹಟ್ಟಿ, ಕುದಾಪುರ, ಐಐಎಸ್ಸಿ, ಡಿಆರ್ಡಿಒ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಯಿತು.

ಜೋಗಿಹಟ್ಟಿ ಗೌಡಗೆರೆ ಸಮೀಪ ವಿದ್ಯುತ್ ಕಂಬ ಮುರಿದಿದೆ. ಗಜ್ಜುಗಾನಹಳ್ಳಿ ರಾಮಸಾಗರ ಮಧ್ಯೆಯೂ ವಿದ್ಯುತ್ ಕಂಬಗಳು ಮುರಿದಿವೆ. ಎನ್.ಮಹದೇವಪುರ ಗ್ರಾಮದ ಹೊರವಲಯದ ಹಳ್ಳದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ.

ಮಲ್ಲೂರಹಳ್ಳಿ, ಅಬ್ವೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಧಾರಣವಾಗಿ ಮಳೆಯಾದರೆ, ತಿಮ್ಮಪ್ಪಯ್ಯನಹಳ್ಳಿ, ಎನ್.ದೇವರಹಳ್ಳಿ, ನೇರಲಗುಂಟೆ, ನೆಲಗೇತನಹಟ್ಟಿ, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಹದವಾಗಿ ಮಳೆಯಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-44-1273458567

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.