ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೀಲಕಂಠೇಶ್ವರ ದೇವಾಲಯ ಜೀರ್ಣೋದ್ಧಾರ, ಕಳಶ ಪ್ರತಿಷ್ಠಾಪನೆ

Published 19 ಆಗಸ್ಟ್ 2024, 16:19 IST
Last Updated 19 ಆಗಸ್ಟ್ 2024, 16:19 IST
ಅಕ್ಷರ ಗಾತ್ರ

ಚಳ್ಳಕೆರೆ: ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ  ನೀಲಕಂಠೇಶ್ವರಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ಗೋಪುರ ಕಳಶ ಪ್ರತಿಷ್ಠಾಪನಾ ಕಾರ್ಯಕ್ರಮ ಸೋಮವಾರ ವಿಜೃಂಭಣೆಯಿಂದ ಜರುಗಿತು.

ಗಣಪತಿ ಪೂಜೆ, ವೇದ-ಮಂತ್ರ ಘೊಷ, ಹೋಮ, ಆಂಜನೇಯಸ್ವಾಮಿ, ಕಾಳಿಕಾ ಮಾತೆ ಮತ್ತು ನೀಲಕಂಠೇಶ್ವರ ಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ಕಾರ್ಯಕ್ರಮ ನಡೆಯಿತು.

ನಂತರ ನಂದಿಧ್ವಜ, ಮಂಗಳವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನೂತನ ಪಂಚಕಳಶ ಹಾಗೂ ಪೂರ್ಣಕುಂಭದ ಮೆರವಣಿಗೆ ನಡೆಯಿತು.

ಕಾಲುವೆಹಳ್ಳಿ ಗ್ರಾಮದ ಎಂ.ರೇಣುಕಸ್ವಾಮಿ ಕಳಶ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿದರು. ನಾಯಕನಹಟ್ಟಿ ಸಂಸ್ಕೃತ ಪಾಠಶಾಲೆಯ ವಿದ್ವಾನ್ ವೀರೇಶ್ ಹಿರೇಮಠ, ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಮುಸ್ಟೂರು ಓಂಕಾರೇಶ್ವರ ಮಠದ ರುದ್ರಮುನಿ ಸ್ವಾಮೀಜಿ, ರೈತ ಮುಖಂಡ ಕೆ.ಪಿ.ಭೂತಯ್ಯ, ಗಾದ್ರಿಪಾಲಯ್ಯ, ಓಬಣ್ಣ, ರಾಘವೇಂದ್ರ, ನಾಗರಾಜ, ತಿಪ್ಪೇಸ್ವಾಮಿ, ಗಾದ್ರಯ್ಯ, ಮಂಜುನಾಥ್, ರಂಗಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT