ಮಂಗಳವಾರ, ಅಕ್ಟೋಬರ್ 27, 2020
22 °C
ಕಾಲೇಜಿಗೆ ಪ್ರಥಮ ಸ್ಥಾನಗಳಿಸಿದ ಸಮಂತ್ ಪಿ ಮಲ್ಲಿಕಾರ್ಜುನ್

ಎಸ್‌ಎಲ್‌ವಿ ಕಾಲೇಜು ವಿದ್ಯಾರ್ಥಿಗಳ ಮೇಲುಗೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ನೀಟ್ ಪರೀಕ್ಷೆಯಲ್ಲಿ ನಗರದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಎಸ್‌ಎಲ್‌ವಿ ಪಿಯು ಕಾಲೇಜಿನ ಸಮಂತ್ ಪಿ. ಮಲ್ಲಿಕಾರ್ಜುನ್ 613 ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾನೆ. ಜೆ. ಕುಮಾರಸ್ವಾಮಿ ರಾಷ್ಟ್ರಮಟ್ಟದಲ್ಲಿ 854ನೇ ರ‍್ಯಾಂಕ್ ಪಡೆದಿದ್ದಾರೆ.

ಕಾಲೇಜಿನ ಎಂ. ಗೋವರ್ಧನ್ 426, ಪಿ.ಎಸ್. ಇಂಚರಾ 420, ಎ. ಜಸ್ವಂತ್ 395, ಜೆ.ಎಸ್. ಚಂದನಾ 353 ಅಂಕ ಗಳಿಸಿದ್ದಾರೆ. 48 ವಿದ್ಯಾರ್ಥಿಗಳು 300ಕ್ಕೂ ಅಧಿಕ ಅಂಕ ಗಳಿಸಿದ್ದಾರೆ. 76 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಎಂ. ಚಂದ್ರಪ್ಪ, ಆಡಳಿತಾಧಿಕಾರಿ ಚಂದ್ರಕಲಾ, ಸಿಇಒ ಎಂ. ರಘುಚಂದನ್, ಪ್ರಾಂಶುಪಾಲ ಬಿ.ಎ. ಕೊಟ್ರೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು