ಬುಧವಾರ, ನವೆಂಬರ್ 25, 2020
25 °C

ಚಳ್ಳಕೆರೆ: ಅಪಘಾತದಲ್ಲಿ ನವ ದಂಪತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ (ಚಿತ್ರದುರ್ಗ): ತಾಲ್ಲೂಕಿನ ಗರಣಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನವ ದಂಪತಿ ಮೃತಪಟ್ಟಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ ಗ್ರಾಮದ ಸುದೀಪ್ (22) ಹಾಗೂ ಪತ್ನಿ  ಭವ್ಯ (19) ಮೃತರು. ಸಂಬಂಧಿಕರ ಮದುವೆ ಮುಗಿಸಿ ಗುರುವಾರ ರಾತ್ರಿ ಗ್ರಾಮಕ್ಕೆ ಮರಳುವಾಗ ಘಟನೆ ಸಂಭವಿಸಿದೆ.

ದ್ವಿಚಕ್ರ ವಾಹನದಲ್ಲಿ ದಂಪತಿ ಚಳ್ಳಕೆರೆಯಿಂದ ಹಿರೇಹಳ್ಳಿ ಕಡೆ ಹೋಗುತ್ತಿದ್ದರು. ಈ ವೇಳೆ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕೆಲ ತಿಂಗಳ ಹಿಂದೆಯಷ್ಟೇ ಇವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಸಂಬಂಧ ತಳಕು ಪೋಲೀಸ್ ಠಾಣೆಯಲ್ಲಿ‌‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು