ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ: ‘ಹೊಸ ಶಿಕ್ಷಣ ನೀತಿ ಸಮಾಜದ ಬದಲಾವಣೆಗೆ ಪೂರಕ’

Last Updated 28 ಸೆಪ್ಟೆಂಬರ್ 2020, 8:30 IST
ಅಕ್ಷರ ಗಾತ್ರ

ಚಳ್ಳಕೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಿದ ಹೊಸ ಶಿಕ್ಷಣ ನೀತಿ ಸಮಾಜದ ಬದಲಾವಣೆಗೆ ಪೂರಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ ಅಭಿಪ್ರಾಯಪಟ್ಟರು.

ನಗರದ ಆದರ್ಶ ವಿದ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಶಿಕ್ಷಣ ಇಲಾಖೆಯ ಅನುಷ್ಠಾನಾಧಿಕಾರಿಗಳಿಂದ ಆಯೋಜಿಸಿದ್ದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಓದಿಗೆ ಪೂರಕವಾದ ಭಾರತೀಯ ಪರಂಪರೆ, ಸಂಸ್ಕೃತಿ ಮತ್ತು ವೈಜ್ಞಾನಿಕ ಅಂಶಗಳು ಹೊಸ ನೀತಿಯಲ್ಲಿ ನಿರೂಪಿತವಾಗಿವೆ. ಆದ್ದರಿಂದ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಮಂಜಣ್ಣ, ಹೊಸ ಶಿಕ್ಷಣ ನೀತಿಯ ರೂಪುರೇಷೆಗಳನ್ನು ಜನರಿಗೆ ತಪ್ಪದೇ ಮನವರಿಕೆ ಮಾಡಿಕೊಡಬೇಕು ಎಂದು ಅನುಷ್ಠಾನ ಅಧಿಕಾರಿಗಳಿಗೆ ಸಲಹೆ ನೀಡಿದರು.

ಮುಖ್ಯಶಿಕ್ಷಕ ಜಿ.ಕೆ.ಶ್ರೀನಿವಾಸ, ಶಿಕ್ಷಣ ಸಂಯೋಜಕರಾದ ಲಿಂಗರಾಜು, ರಾಧಾ, ದಾದಾಪೀರ್, ಬಿಆರ್‍ಪಿ ಮಲ್ಲಿಕಾರ್ಜುನ, ಪ್ರಸನ್ನ, ಇಸಿಒ ಮಾರುತಿ ಭಂಡಾರಿ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಶಿಕ್ಷಕ ಈರಸ್ವಾಮಿ, ಎಸ್.ವಿಷ್ಣುವರ್ಧನ, ಬೊಮ್ಮಲಿಂಗಪ್ಪ, ಎಲ್.ರುದ್ರಮುನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT