ಚಿತ್ರದುರ್ಗ: ಕೋವಿಡ್ ಹರಡುವಿಕೆ ನಿಯಂತ್ರಿಸುವ ಸಂಬಂಧ ಡಿ. 30 ರಿಂದ 2021ರ ಜ. 2ರ ವರಗೂ ಕ್ಲಬ್, ಪಬ್, ರೆಸ್ಟೋರೆಂಟ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಡಿಜೆ ನೃತ್ಯ, ವಿಶೇಷ ಪಾರ್ಟಿ, ಒಂದೆಡೆ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ಹೊಸ ವರ್ಷದ ಆಚರಣೆಯ ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಅದಕ್ಕಾಗಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ಹೆಚ್ಚು ಜನ ಸೇರುವ ವಸತಿ ಸಮುಚ್ಛಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಸಾಮೂಹಿಕ ಕೂಟಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ, ಯಾವುದೇ ಸ್ಥಳದಲ್ಲೂ ಹಸ್ತಲಾಘವ ಮತ್ತು ಆಲಿಂಗನ ಮಾಡದಂತೆ ಸೂಚಿಸಲಾಗಿದೆ.

ನಿಷೇಧದ ಅವಧಿಯಲ್ಲಿ ಕ್ಲಬ್, ಪಬ್, ರೆಸ್ಟೋರೆಂಟ್‌ಗಳಲ್ಲಿ ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಉಲ್ಲಂಘಿಸಿದರೆ ಕಾನೂನು ಕ್ರಮ: ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ, ಪೊಲೀಸ್, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ, ಸೇರಿ ಇತರೆ ಇಲಾಖೆಗಳು ಹೊರಡಿಸಿರುವ ಸೂಚನೆ ಹಾಗೂ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಆದೇಶ, ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಭಾರತೀಯ ದಂಡ ಸಂಹಿತೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಜನ ಜಂಗುಳಿ ಸೇರುವಂತಿಲ್ಲ:ಹೊಸ ವರ್ಷಾಚರಣೆ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಹೆಚ್ಚು ಜನರು ಸೇರಿ ಸಂಭ್ರಮಾಚರಣೆ ಮಾಡುವಂತಿಲ್ಲ.65 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು.

ಹೋಟೆಲ್, ಮಾಲ್‌ಗಳು, ಪಬ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸೋಂಕು ನಿವಾರಕ ದ್ರಾವಣದ ವ್ಯವಸ್ಥೆ ಕಡ್ಡಾಯ.ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ನೀಡಲಾಗಿದೆ.ಕೋವಿಡ್ ಮಾರ್ಗಸೂಚಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.