ಬುಧವಾರ, ಜನವರಿ 19, 2022
27 °C
ಮೊಳಕಾಲ್ಮುರು: ಹಿರಿಯ ವಕೀಲರಿಗೆ ಸನ್ಮಾನ

ವೃತ್ತಿಯಲ್ಲಿ ಪರಿಶ್ರಮ ವಹಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೊಳಕಾಲ್ಮುರು: ವಕೀಲರು ತಮ್ಮ ವೃತ್ತಿಯಲ್ಲಿ ಪರಿಶ್ರಮಕ್ಕೆ ಆದ್ಯತೆ ನೀಡಬೇಕು. ವೃತ್ತಿ ಬದ್ಧತೆಗೆ ಕೈಜೋಡಿಸುವ ಮೂಲಕ ಮಾದರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ರೇಷ್ಮಾ ಕೆ.ಗೋಣಿ ಸಲಹೆ ನೀಡಿದರು.

ಸಿವಿಲ್ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ವಕೀಲರ ಸಂಘ ಶುಕ್ರವಾರ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಜಾಗತೀಕರಣ ಪರಿಣಾಮ ಇತ್ತೀಚಿನ ದಿನಗಳಲ್ಲಿ ಬರವಣಿಗೆ ಕಡಿಮೆಯಾಗುತ್ತಿದೆ. ಇದಕ್ಕೆ ವಕೀಲರೂ ಹೊರತಾಗಿಲ್ಲ. ವಕೀಲರು ಬರವಣಿಗೆಯನ್ನು ಹೆಚ್ಚು ಕೈಗೊಳ್ಳುವ ಮೂಲಕ ವೃತ್ತಿಯ ಮೇಲೆ ಹಿಡಿತ ಹೊಂದಲು ಸಾಧ್ಯವಾಗಲಿದೆ. ಆದ್ದರಿಂದ ಬರವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕಿನಲ್ಲಿ 20 ವರ್ಷಕ್ಕೂ ಹೆಚ್ಚು ಕಾಲ ವಕೀಲ ವೃತ್ತಿ ಮಾಡಿರುವವರನ್ನು ಸನ್ಮಾನಿಸಲಾಯಿತು. ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಆರ್. ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಕೀಲರ ಸಂಘದ ಉಪಾಧ್ಯಕ್ಷ ಡಿ.ಬಸವರಾಜ್, ಪ್ರಧಾನ ಕಾರ್ಯದರ್ಶಿ ವಿ.ಡಿ. ರಾಘವೇಂದ್ರ, ಕೆ.ಎಂ. ರಾಮಾಂಜಿನೇಯ, ಚಾಣಾಕ್ಯ, ಸದಸ್ಯರಾದ ಆರ್.ಎಂ. ಅಶೋಕ್, ಪರಮೇಶ್ವರಪ್ಪ, ಬಿ. ಒಳಮಠ್, ಎಂ.ಎನ್. ವಿಜಯಲಕ್ಷ್ಮೀ, ರಾಜಶೇಖರ ನಾಯಕ್, ವಸಂತಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು