ಬುಧವಾರ, ಜನವರಿ 19, 2022
27 °C

ಎಸಿಬಿ ಬಲೆಗೆ ಅಬಕಾರಿ ಡಿವೈಎಸ್‌ಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಬಾರ್‌ ಆ್ಯಂಡ್‌ ರೆಸ್ಟೋರಂಟ್‌ ಮಾಲೀಕರಿಂದ ₹ 15 ಸಾವಿರ ಲಂಚ ಪಡೆಯುತ್ತಿದ್ದ ಅಬಕಾರಿ ಡಿವೈಎಸ್‌ಪಿ ಶಿವಹರಳಯ್ಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಲಂಚದ ರೂಪದಲ್ಲಿ ಪಡೆದ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಶಿವಹರಳಯ್ಯ ಅವರನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಹುಳಿಯಾರು ಪಟ್ಟಣದ ಎಚ್‌.ಡಿ.ಎನ್‌. ರಾಜು ಎಂಬುವರು ಅಬಕಾರಿ ಡಿವೈಎಸ್‌ಪಿ ವಿರುದ್ಧ ಎಸಿಬಿಗೆ ದೂರು ನೀಡಿದ್ದರು.

ರಾಜು ಅವರು ಹೊಳಲ್ಕೆರೆ ತಾಲ್ಲೂಕಿನ ಬಂಜಗೊಂಡನಹಳ್ಳಿಯಲ್ಲಿ ಲಕ್ಷ್ಮೀನರಸಿಂಹ ಬಾರ್‌ ಆ್ಯಂಡ್‌ ರೆಸ್ಟೋರಂಟ್‌ ನಡೆಸುತ್ತಿದ್ದಾರೆ. ಶಿವಹರಳಯ್ಯ ತಪಾಸಣೆಯ ನೆಪದಲ್ಲಿ ಇಲ್ಲಿಗೆ ಆಗಾಗ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರು. ಲೆಕ್ಕಪುಸ್ತಕ ಹಾಗೂ ದಾಸ್ತಾನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲವೆಂದು ಪರವಾನಗಿ ರದ್ದುಪಡಿಸುವ ಬೆದರಿಕೆ ಹಾಕುತ್ತಿದ್ದರು ಎಂದು ಎಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಡಿ.2ರಂದು ಬಾರ್‌ ಮಾಲೀಕರಿಗೆ ಶಿವಹರಳಯ್ಯ ₹ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಶುಕ್ರವಾರ ಮಧ್ಯಾಹ್ನ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಡಿವೈಎಸ್‌ಪಿ ಬಸವರಾಜ್ ಆರ್.ಮಗದುಮ್ ನೇತೃತ್ವದ ತಂಡ ಶಿವಹರಳಯ್ಯ ಅವರನ್ನು ಬಂಧಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು