ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ
Last Updated 4 ಡಿಸೆಂಬರ್ 2021, 3:36 IST
ಅಕ್ಷರ ಗಾತ್ರ

ಹಿರಿಯೂರು: ‘ಭಾರತೀಯ ಸಂಸ್ಕೃತಿಯನ್ನು ಗುತ್ತಿಗೆ ಪಡೆದವರಂತೆ ಮಾತನಾಡುವ ಬಿಜೆಪಿ ವರಿಷ್ಠರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು, ಅಶ್ಲೀಲ ಪದಬಳಕೆ ಮಾಡುತ್ತಿರುವ ತಮ್ಮ ಪಕ್ಷದ ಶಾಸಕರ ಬಾಯಿಗೆ ಬೀಗ ಹಾಕಬೇಕು’ ಎಂದು ಕಾಂಗ್ರೆಸ್‌ ಮಹಿಳಾ ಘಟಕದ ನಗರ ಬ್ಲಾಕ್ ಅಧ್ಯಕ್ಷೆ ಸುರೇಖಾಮಣಿ ಒತ್ತಾಯಿಸಿದರು.

ಶಾಸಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಮೂಲಕ ನಿಂದಿಸಿರುವುದನ್ನು ಖಂಡಿಸಿ, ಜಾರಕಿಹೊಳಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ನಗರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು.

‘ಬಿಜೆಪಿ ಆಡಳಿತದಲ್ಲಿ ಕಾನೂನು, ಸಾಮಾಜಿಕ ಸಾಮರಸ್ಯ, ಶಾಂತಿ–ಸಹಬಾಳ್ವೆ ಎಂಬ ಮಾತುಗಳು ಅರ್ಥ ಕಳೆದುಕೊಂಡಿವೆ. ಕರ್ನಾಟಕ ಜಂಗಲ್ ರಾಜ್ಯ ಆಗುತ್ತಿರುವ ಸಂಶಯ ಮೂಡುತ್ತಿದೆ. ಜಾರಕಿಹೊಳಿ ವಿರುದ್ಧದ ರಾಸಲೀಲೆ ಪ್ರಕರಣ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿರುವಾಗ ಜನಪ್ರತಿನಿಧಿಯೊಬ್ಬರ ಬಗ್ಗೆ ಆಡಿರುವ ಮಾತುಗಳು ಬಿಜೆಪಿ ಮುಖಂಡರ ಮನಸ್ಥಿತಿ ಎಂತಹುದು ಎಂಬುದನ್ನು ತೋರಿಸುತ್ತದೆ. ಮಹಿಳೆಯರಿಗೆ, ಸಾರ್ವಜನಿಕರಿಗೆ ತೊಂದರೆ ಕೊಡುವಂತಹ, ಅವಮಾನಿಸುವಂತಹ ಯಾವುದೇ ಘಟನೆ ನಡೆದರೂ ಕಾಂಗ್ರೆಸ್ ಕೈಕಟ್ಟಿ ಕೂರುವುದಿಲ್ಲ’ ಎಂದು ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ ಎಚ್ಚರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ನಗರಸಭೆ ಉಪಾಧ್ಯಕ್ಷ ಬಿ.ಎನ್. ಪ್ರಕಾಶ್, ಸದಸ್ಯರಾದ ರತ್ನಮ್ಮ, ಮಮತಾ, ಗೀತಾ, ಶಿವರಂಜನಿ, ವಿಶಾಲಾಕ್ಷಮ್ಮ, ಕವಿತಾ, ಮದಲಾ ಮರಿಯಾ, ಕಾರ್ಮಿಕ ಘಟಕದ ಅಧ್ಯಕ್ಷ ಶಿವಕುಮಾರ್, ಎಸ್‌ಸಿ ಘಟಕದ ಉಪಾಧ್ಯಕ್ಷ ಜ್ಞಾನೇಶ್, ಸಾಮಾಜಿಕ ಜಾಲ ತಾಣದ ಅಧ್ಯಕ್ಷ ಪಾಲಾಕ್ಷ ಯಾದವ್, ಜಗಜೀವನ್ ಅವರೂ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT