ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಮಟ್ಟದ ಕಾಲ್ನಡಿಗೆ ಜಾಥಾ

ಬಿ.ಪಿ. ತಿಪ್ಪೇಸ್ವಾಮಿ ಮಾಹಿತಿ
Last Updated 30 ಸೆಪ್ಟೆಂಬರ್ 2022, 4:01 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಚಿತ್ರದುರ್ಗ: ಜಾತಿ, ಧರ್ಮದ ಆಧಾರದ ಮೇಲೆ ಚುನಾವಣೆ ನಡೆಯುತ್ತಿರುವುದರಿಂದ ನಿವೃತ್ತಿ ನಂತರ ಬೀದಿಪಾಲಾಗುವ ಶಿಕ್ಷಕರ ಜೀವನದ ಬಗ್ಗೆ ಸರ್ಕಾರಗಳು ನಿರ್ಲಕ್ಷ್ಯ ಭಾವ ತೋರಿವೆ ಎಂದು ಸರ್ಕಾರಿ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಗೌರವಾಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಬೇಸರಿಸಿದರು.

ನಗರದ ಹೇಮರೆಡ್ಡಿ ಮಲ್ಲಮ್ಮ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಸರ್ಕಾರಿ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಸಭೆಯಲ್ಲಿ ಅವರು ಮಾತನಾಡಿದರು.

‘ಅನುದಾನಿತ ಶಾಲಾ ಶಿಕ್ಷಕರ ಸ್ಥಿತಿ ಶೋಚನೀಯವಾಗಿದೆ. ನಿವೃತ್ತಿ ಬಳಿಕ ತೀರಾ ಸಂಕಷ್ಟಕ್ಕೆ ಸಿಲುಕುತ್ತಾರೆ’ ಎಂದರು.

‘ಶಿಕ್ಷಕರ ಸಮಸ್ಯೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲು ಅಕ್ಟೋಬರ್‌ 6ರಿಂದ ತುಮಕೂರಿನ ಸಿದ್ಧಗಂಗಾ ಮಠದಿಂದ 6ದಿನಗಳ ಕಾಲ ರಾಜ್ಯಮಟ್ಟದ ಕಾಲ್ನಡಿಗೆ ಜಾಥಾ ಆರಂಭವಾಗಲಿದೆ. ಏಳನೇ ದಿನ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಳ್ಳಲಿದೆ. ಜಾಥಾದ ಉದ್ಘಾಟನೆಗೆ ಅಹಿಂದ ವರ್ಗದ ಸುಮಾರು ಇಪ್ಪತ್ತು ಮಠಾಧೀಶರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಜಿ.ಎಸ್‌.ತಿಪ್ಪೇಸ್ವಾಮಿ, ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಆರ್‌.ಮಲ್ಲೇಶ್‌, ದುರುಗೇಶ್‌, ನಿಜಲಿಂಗಪ್ಪ, ಜಯಲಕ್ಷ್ಮಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT