ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಯೋಜನೆ ಅಡಿ ಮನೆ ನಿರ್ಮಿಸಲು ಆಗ್ರಹ

Last Updated 25 ನವೆಂಬರ್ 2022, 4:47 IST
ಅಕ್ಷರ ಗಾತ್ರ

ಮೊಳಕಾಲ್ಮುರು: ಕೊಳಚೆ ನಿರ್ಮೂಲನಾ ಮಂಡಳಿಯು ವಸತಿ ಯೋಜನೆ ಅಡಿ ಮನೆಗಳನ್ನು ಶೀಘ್ರ ನಿರ್ಮಿಸಿ ಫಲಾನುಭವಿಗಳಿಗೆ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿ ಪಟ್ಟಣ ಪಂಚಾಯಿತಿ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಅಂದಾಜು 500 ಮನೆಗಳು ಮಂಜೂರಾಗಿದ್ದು, ಕಾಮಗಾರಿಯು ಆಮೆ ವೇಗದಲ್ಲಿ ಸಾಗಿದೆ. ಫಲಾನುಭವಿಗಳಿಂದ ವಂತಿಕೆ ಹಣವನ್ನು ಕಟ್ಟಿಸಿಕೊಂಡು ಸತಾಯಿಸುತ್ತಿರುವುದು ಸರಿಯಲ್ಲ. ಇದರಿಂದ ಫಲಾನುಭವಿಗಳಿಗೆ ದಿಕ್ಕು ತೋಚದಂತಾಗಿದೆ ಎಂದು ದೂರಿದರು.

ನಿರ್ಮಾಣ ಹಂತದಲ್ಲಿರುವ ಮನೆಗಳು ಕಳಪೆಯಿಂದ ಕೂಡಿರುವ ಬಗ್ಗೆ ಹಲವು ಸಲ ದೂರಿದರೂ ಸಮಸ್ಯೆ ಮುಂದುವರಿದಿದೆ. ಸಂಬಂಧಪಟ್ಟವರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಟಿ.ಟಿ. ರವಿಕುಮಾರ್, ‘ಈ ಬಗ್ಗೆ ಮುಖ್ಯಾಧಿಕಾರಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮರ್ಲಹಳ್ಳಿ ರವಿಕುಮಾರ್, ಕೊಂಡಾಪುರ ಪರಮೇಶ್ವರಪ್ಪ, ಮಂಜಣ್ಣ, ಚಂದ್ರಣ್ಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT