ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು

Published : 2 ಆಗಸ್ಟ್ 2024, 15:26 IST
Last Updated : 2 ಆಗಸ್ಟ್ 2024, 15:26 IST
ಫಾಲೋ ಮಾಡಿ
Comments

ಹಿರಿಯೂರು: ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾm ಪಂಚಾಯಿತಿ ಪಿಡಿಒ ಸಿ. ಈಶ್ವರ್ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ. ಸೋಮಶೇಖರ್ ಅವರು ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಿ ಶುಕ್ರವಾರ ಆದೇಶಿಸಿದ್ದಾರೆ.

ಜವನಗೊಂಡನಹಳ್ಳಿಯ ಕೆ.ಎಚ್. ಶಶಿಕಾಂತ್ ಹಾಗೂ ಎಚ್.ಎಂ. ಭರತ್ ಅವರು ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ತನಿಖೆ ನಡೆಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ವರದಿ ನೀಡಿದ್ದರು.

ಗ್ರಾಮ ಪಂಚಾಯಿತಿಯಲ್ಲಿ 2018–19ನೇ ಸಾಲಿನಿಂದ 2022–23ನೇ ಸಾಲಿನವರೆಗಿನ ಪಂಚಾಯಿತಿಯ ಹಣಕಾಸು, ಕಾಮಗಾರಿ, ಕಂದಾಯ ಲೆಕ್ಕ ಶೀರ್ಷಿಕೆಯಡಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ದಾಖಲಾತಿಗಳನ್ನು ಒದಗಿಸುವಂತೆ ಕೋರಲಾಗಿತ್ತು. ದಾಖಲಾತಿಗಳನ್ನು ಒದಗಿಸುವಲ್ಲಿ ಅಧಿಕಾರಿ ವಿಫಲರಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಇಒ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT