ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

Last Updated 3 ಜುಲೈ 2022, 2:57 IST
ಅಕ್ಷರ ಗಾತ್ರ

ಚಿತ್ರದುರ್ಗ: ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಚಿತ್ರದುರ್ಗ-ದಾವಣಗೆರೆ ಜಿಲ್ಲಾ ಸಮಿತಿ ಶನಿವಾರ ಸೀಬಾರದ ಸಮೀಪ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿತು.

‘ಆಯೋಗವು ಸಲ್ಲಿಸಿದ ವರದಿಯನ್ನು ಜಾರಿಗೊಳಿಸಲು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮೀನಮೇಷ ಏಣಿಸುತ್ತಿದೆ. ಶೀಘ್ರ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ನಮ್ಮ ಕಾಲೊನಿಗಳಲ್ಲಿ ನಿಮ್ಮನ್ನು ಬಿಟ್ಟುಕೊಳ್ಳುವುದಿಲ್ಲ. ಜತೆಗೆ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಹೆದ್ದಾರಿ ಸಂಚಾರ ತಡೆಯಿಂದ ಕೆಲಕಾಲ ವಾಹನ ಸಂಚಾರ ದಟ್ಟಣ ಉಂಟಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಹೋರಾಟ ಸಮಿತಿ ಜಿಲ್ಲಾ ಘಟದ ಅಧ್ಯಕ್ಷ ಬಿ.ತಿಪ್ಪೇಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್‌.ರವೀಂದ್ರ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಆರ್‌.ನಾಗರಾಜ್‌, ದಾವಣಗೆರೆ ಜಿಲ್ಲಾ ಘಟದ ಅಧ್ಯಕ್ಷ ಎಚ್‌.ಸಿ.ಗುಡ್ಡಪ್ಪ, ಎಚ್‌.ಚಂದ್ರಶೇಖರ, ಟಿ.ಎಚ್‌.ಮಹೇಶ್‌, ಎಚ್‌.ಹನುಮಂತಪ್ಪ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT