ಸೋಮವಾರ, ಆಗಸ್ಟ್ 8, 2022
23 °C

ಉನ್ನತ ತನಿಖೆಗೆ ಎಸ್‌ಡಿಪಿಐ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ನಡೆದ ಕೊಲೆ ಯತ್ನ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್‌ ಒತ್ತಾಯಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲೆ ದಾಳಿಗಳು ಹೆಚ್ಚಾಗಿವೆ. ಜಾತಿ, ಧರ್ಮದ ಕಾರಣಕ್ಕಾಗಿ ಸಮೀವುಲ್ಲಾ ಎಂಬಾತನ ಮೇಲೆ ನೂತನ್‌ ಎಂಬಾತ ಕೊಲೆ ಮಾಡಲು ಯತ್ನಿಸಿದ್ದಾನೆ. ಈ ಕೃತ್ಯ ಪೂರ್ವ ನಿಯೋಜಿತವಾಗಿದೆ’ ಎಂದರು.

ಮಸ್ಕಲ್ ಗ್ರಾಮದ ಸಮೀಪದ ಮಳಿಯಾನ ಕಾಲೊನಿಯಲ್ಲಿ ಕ್ರೈಸ್ತ ಸಮುದಾಯದ ಮಹಿಳೆಯರಿಗೆ ಜೀವ ಬೆದರಿಕೆಯೊಡ್ಡಿ ಬೈಬಲ್‌ ಅನ್ನು ಬಹಿರಂಗವಾಗಿ ಸುಟ್ಟು ಹಾಕಲಾಗಿದೆ. ಇದರ ಹಿಂದೆ ಕೇಸರೀಕರಣದ ಕೈವಾಡವಿದೆ. ಈ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮ ವಹಿಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಆಗ್ರಹಿಸಿದರು. ಎಸ್‌ಡಿಪಿಐ ಉಪಾಧ್ಯಕ್ಷ ಕಾಮ್ರಾನ್‌ ಅಲಿ, ಕಾರ್ಯದರ್ಶಿ ಸೈಯದ್‌ ಸಾದತ್‌, ತಾಲ್ಲೂಕು ಘಟಕದ ಅಧ್ಯಕ್ಷ ಜಾಕೀರ್‌ ಹುಸೇನ್‌, ಹಿರಿಯೂರು ತಾಲ್ಲೂಕು ಘಟಕದ ಅಧ್ಯಕ್ಷ ಖಾಲಿದ್‌, ಉಪಾಧ್ಯಕ್ಷ ಮುಜಾಹಿದ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.