ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಐವಿ ಸೋಂಕಿತರನ್ನು ಎಲ್ಲರಂತೆಯೇ ಕಾಣಿರಿ

ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ಗಿರೀಶ್
Last Updated 4 ಡಿಸೆಂಬರ್ 2021, 3:51 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಎಚ್‌ಐವಿ ಸೋಂಕಿತರನ್ನು ಮಾನವೀಯತೆಯಿಂದ ಕಾಣಬೇಕು. ಅವರನ್ನು ಮನೆಯಿಂದಾಚೆ ಇಡುವುದು. ದೂರದಿಂದ ಮಾತನಾಡಿಸುವುದು ಸರಿಯಲ್ಲ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ಗಿರೀಶ್ ಸಲಹೆ ನೀಡಿದರು.

ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ಕಾಲೇಜಿನ ಎನ್ಎಸ್‌ಎಸ್‌ ಘಟಕದಿಂದ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್. ರಂಗನಾಥ್, ‘ಸತತ 7 ವರ್ಷಗಳಲ್ಲಿ ಜಿಲ್ಲೆಯಲ್ಲಿ ಒಂದು ಮಗು ಕೂಡ ಎಚ್‌ಐವಿ ಸೋಂಕಿನಿಂದ ಜನಿಸಿಲ್ಲ. ಅದೇ ರೀತಿ ಇದರಿಂದ ಸಾಯುವವರ ಸಂಖ್ಯೆಯೂ ಕಡಿಮೆಯಾಗಿದೆ. 5 ವರ್ಷಗಳಿಂದ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಈವರೆಗೂ 8 ಲಕ್ಷಕ್ಕೂ ಹೆಚ್ಚು ಮಂದಿಗೆ ಎಚ್‌ಐವಿ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 7,818 ಮಂದಿ ಸೋಂಕಿತರನ್ನು ಪತ್ತೆ ಮಾಡಲಾಗಿದೆ. ಸೂಕ್ತ ಚಿಕಿತ್ಸೆ, ಔಷಧ ವಿತರಿಸಲಾಗುತ್ತಿದೆ’ ಎಂದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ರೇಣುಪ್ರಸಾದ್, ಪ್ರಾಂಶುಪಾಲ ಡಾ.ಗೋಪಾಲಪ್ಪ, ಸಂಚಾಲಕ ಡಾ.ರಮೇಶ್ ಬೆಟಗೇರಿ, ಡಾ.ರಮೇಶ್ ಐನಹಳ್ಳಿ, ಡಾ.ತಿಪ್ಪೇಸ್ವಾಮಿ. ಡಾ.ಫಾಲಾಕ್ಷಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT