ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರು ಆರೋಗ್ಯ ಕಾಳಜಿಯ ಅರಿವು ಬೆಳೆಸಿಕೊಳ್ಳಿ : ಡಾ. ಎಂ. ವಿ. ಅಶೋಕ್

Published 1 ಸೆಪ್ಟೆಂಬರ್ 2023, 13:03 IST
Last Updated 1 ಸೆಪ್ಟೆಂಬರ್ 2023, 13:03 IST
ಅಕ್ಷರ ಗಾತ್ರ

ಭದ್ರಾವತಿ: ಮಹಿಳೆಯರು ಸಾಮಾನ್ಯ ಕಾಯಿಲೆಗಳ ಕುರಿತು ಅರಿವು ಹೊಂದುವ ಮೂಲಕ ಪ್ರಾಥಮಿಕ ಹಂತದಲ್ಲಿಯೇ ಎಚ್ಚರಿಕೆ ಕ್ರಮಗಳನ್ನು ಅನುಸರಿಸುವುದರಿಂದ ಸಂಪೂರ್ಣ ಗುಣಮುಖರಾಗಬಹುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಎಂ.ವಿ.ಅಶೋಕ್ ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿ ರೋಟರಿ ಕ್ಲಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಎಚ್.ಎಲ್ ವರ್ಷ, ಮಹಿಳೆಯರ ಆರೋಗ್ಯ ಕುರಿತು ಮಾಹಿತಿ ನೀಡಿದರು. ಯುವ ಮುಖಂಡ ಬಿ.ಎಂ.ರವಿಕುಮಾರ್ ಕಾರ್ಯಾಗಾರ ಉದ್ಘಾಟಿಸಿದರು. ಯೋಜನಾಧಿಕಾರಿ ಮಾಧವ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎನ್‌ಸಿಡಿ ಆಪ್ತಸಮಾಲೋಚಕಿ ಶ್ರೀದೇವಿ ಪ್ರಾರ್ಥಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದ ಸಮನ್ವಯಾಧಿಕಾರಿ ಸೌಮ್ಯ ಸ್ವಾಗತಿಸಿದರು. ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಸುಶೀಲಾ ಬಾಯಿ, ಯೋಜನೆಯ ಹೊಸಮನೆ ಮೇಲ್ವಿಚಾರಕಿ ಪುಷ್ಪಲತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT