ಚಳ್ಳಕೆರೆ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆಯೊಂದಿಗೆ ಅಕ್ರಮಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಎಸ್‍ಎಸ್‍ಟಿ ತಂಡದ ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರ ನಗರ ಹಾಗೂ ಗ್ರಾಮೀಣ ಪ್ರದೇಶದ ಚೆಕ್‍ಪೋಸ್ಟ್‌ಗಳಿಗೆ ಭೇಟಿ ಪರಿಶೀಲನೆ ನಡೆಸಿದರು.
ಶಿಸ್ತು, ಸಮಯ ಪಾಲನೆಯ ಜತೆಗೆ ಚೆಕ್‍ಪೋಸ್ಟ್‌ಗಳಲ್ಲಿ ದಿನದ 24 ಗಂಟೆ ನಿರಂತರ ವಾಹನ ತಪಾಸಣಾ ಕಾರ್ಯ ತಪ್ಪದದೇ ನಡೆಸಬೇಕು. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಹೊರ ರಾಜ್ಯ ಹಾಗೂ ಜಿಲ್ಲೆಯಿಂದ ಬರುವ ವಾಹನ ತಪಾಸಣಾ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ದಿವಾಕರ, ಚುನಾವಣಾಧಿಕಾರಿ ಬಿ.ಆನಂದ, ಸಹಾಯಕ ಚುನಾವಣಾಧಿಕಾರಿ ರೆಹಾನ್ ಪಾಷ, ಶ್ರೀಧರ್, ಪ್ರಕಾಶ್, ಎಸ್‍ಎಸ್‍ಟಿ ಅಧಿಕಾರಿ ಆಂಜನಪ್ಪ, ಪಿಎಸ್‍ಐ ಸತೀಶ್‍ನಾಯ್ಕ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.