ಶನಿವಾರ, ನವೆಂಬರ್ 28, 2020
24 °C

ಹೊಳಲ್ಕೆರೆ: ಸರಣಿ ಅಪಘಾತದಲ್ಲಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳಲ್ಕೆರೆ (ಚಿತ್ರದುರ್ಗ): ತಾಲ್ಲೂಕಿನ ಹಳೇಹಳ್ಳಿ ಗೇಟ್ ಸಮೀಪ ಬುಧವಾರ ಎರಡು ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿಯನ್ನು ಶಂಭು (60) ಎಂದು ಗುರುತಿಸಲಾಗಿದೆ. ತರಿಕೆರೆ ತಾಲ್ಲೂಕಿನ ಲಕ್ಕವಳ್ಳಿಯಿಂದ ಹೊಳಲ್ಕೆರೆ ತಾಲ್ಲೂಕಿನ ಕೊಂಡಾಪುರ ಗ್ರಾಮಕ್ಕೆ ಹೆಣ್ಣು ನೋಡಲು ಎರಡು ಕಾರುಗಳಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಚಿತ್ರದುರ್ಗ ಕಡೆಯಿಂದ ವೇಗವಾಗಿ ಬಂದ ಲಾರಿ, ಚಾಲಕನ ನಿಯಂತ್ರಣ ಕಳೆದುಕೊಂಡು ಎರಡೂ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ಚಿತ್ರಹಳ್ಳಿ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.


ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು