ಶುಕ್ರವಾರ, ಮಾರ್ಚ್ 5, 2021
27 °C

ಮದ್ಯ ಮಾರಾಟಕ್ಕೆ ಅವಕಾಶ: ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕೇಂದ್ರ ಸರ್ಕಾರ ಮದ್ಯಪಾನ ನಿಷೇಧ ಹಿಂಪಡೆದುಕೊಂಡಿದ್ದನ್ನು ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ.

‘ಸರ್ಕಾರ ಮದ್ಯಪಾನಕ್ಕೆ ಅನುಮತಿ ನೀಡಿರುವುದು ನಿಜಕ್ಕೂ ನಮಗೆ ಆಘಾತವಾಗಿದೆ. ಜನರ ಆರೋಗ್ಯಕ್ಕಿಂತ ಆದಾಯವೇ ಮುಖ್ಯವೆಂದು ಭಾವಿಸುವ ನೇತಾರರಿಂದ ಖಂಡಿತ ದೇಶದ ಪ್ರಗತಿ ಸಾಧ್ಯವಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಕೊರೊನಾ ಸಂಬಂಧ ಮದ್ಯಪಾನ ನಿಷೇಧಿಸಿದ್ದರಿಂದ ಬಹುತೇಕ ಮದ್ಯವ್ಯಸನಿಗಳು ಆ ದುಶ್ಚಟದಿಂದ ದೂರವಾಗಲು ನಿರ್ಧರಿಸಿದ್ದರು. ಸರ್ಕಾರದ ತೀರ್ಮಾನ ನಿದ್ದೆ ಬಂದವರಿಗೆ ನಿದ್ದೆ ಮಾತ್ರೆ ಕೊಟ್ಟಂತಾಗಿದೆ. ಕುಡಿದ ಅಮಲಿನಲ್ಲಿ ಅಂತರ ಕಾಯ್ದುಕೊಳ್ಳಲು ಸಾಧ್ಯವೇ’ ಎಂದು ಪ್ರಶ್ನಿಸಿದ್ದಾರೆ.

‘ಈ ನಿರ್ಧಾರದಿಂದ ಮತ್ತಿನ್ನೇನು ಅನಾಹುತಕ್ಕೆ ಕಾರಣವಾಗುವುದೋ? ಕುಡಿತದಿಂದ ಹಣ, ಆರೋಗ್ಯ, ನೆಮ್ಮದಿ ನೆಲಕಚ್ಚುವುದಲ್ಲದೆ ಕಳವು, ಸುಲಿಗೆ, ಅಪಘಾತ ಇತರ ಅನಾಹುತಗಳು ಸಾಲು ಸಾಲಾಗಿ ನಡೆಯಬಹುದು. ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಇನ್ನೂ ಸ್ವಾತಂತ್ರ್ಯವಿದೆ. ಕೊರೊನಾ ಸೋಂಕು  ಮರೆಯಾಗುವವರೆಗೂ ಸಂಪೂರ್ಣ ಮದ್ಯ ನಿಷೇಧ ಮಾಡಿ ನಂತರ ಸರ್ವೆ ಮೂಲಕ ಮುಂದಿನ ಕ್ರಮ ಜರುಗಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು