ಶನಿವಾರ, ಜೂನ್ 19, 2021
21 °C

ಅದಿರು ಅಕ್ರಮ ಸಾಗಣೆ: ಎರಡು ಲಾರಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕರ್ಫ್ಯೂ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಎರಡು ಲಾರಿಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಭಾನುವಾರ ನಸುಕಿನಲ್ಲಿ ಎರಡು ಲಾರಿಗಳು ಚಳ್ಳಕೆರೆ ತಾಲ್ಲೂಕಿನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿ
ದ್ದದು ಗಸ್ತಿನಲ್ಲಿದ್ದ ಅಧಿಕಾರಿಗಳ ಗಮನಕ್ಕೆ ಬಂದಿದೆ. ಚಳ್ಳಕೆರೆ ತಾಲ್ಲೂಕಿನ ಕುರಡಿಹಳ್ಳಿ ಬಳಿ ಲಾರಿಗಳನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಸಾಗಣೆ ಗಮನಕ್ಕೆ ಬಂದಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿಗಳಾದ ಬಿ.ಎನ್.ಉಮಾಪತಿ, ಸನ್ನಿತ್, ಚಾಲಕರಾದ ನಾಗರಾಜ ಹಾಗೂ ಟಿ.ತಿಪ್ಪಯ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು