ಸೋಮವಾರ, ಜೂನ್ 21, 2021
29 °C
ವೈದ್ಯಕೀಯ ಆಮ್ಲಜನಕ ಪೂರೈಕೆ ವಿಳಂಬ

ಸಂಕಷ್ಟ ಎದುರಿಸಿದ ಸೋಂಕಿತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಹರಿಹರದಿಂದ ಪೂರೈಕೆ ಆಗುವ ವೈದ್ಯಕೀಯ ಆಮ್ಲಜನಕದ ಟ್ಯಾಂಕರ್‌ ಬರುವುದು ಎರಡು ಗಂಟೆ ವಿಳಂಬ ಆಗಿದ್ದರಿಂದ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜಂಬೂ ಸಿಲಿಂಡರ್‌ ಬಳಸಿ ರೋಗಿಗಳಿಗೆ ಪ್ರಾಣವಾಯು ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ನಿತ್ಯ ಮೂರು ಸಾವಿರ ಲೀಟರ್ ವೈದ್ಯಕೀಯ ಆಮ್ಲಜನಕದ ಅಗತ್ಯವಿದೆ. ಬುಧವಾರ ಎರಡು ಸಾವಿರ ಲೀಟರ್‌ ಮಾತ್ರ ಪೂರೈಕೆ ಆಗಿತ್ತು. ಗುರುವಾರ ಬೆಳಿಗ್ಗೆ 11.30ಕ್ಕೆ ಟ್ಯಾಂಕರ್‌ ಬರಬೇಕಿತ್ತು. ನಿಗದಿತ ಸಮಯಕ್ಕೆ ಟ್ಯಾಂಕರ್‌ ಬಾರದಿರುವುದು ಸಮಸ್ಯೆ ಸೃಷ್ಟಿಸಿತು.

ಜಿಲ್ಲಾ ಆಸ್ಪತ್ರೆಯಲ್ಲಿರುವ 124 ಜಂಬೂ ಸಿಲಿಂಡರ್‌ ಪೈಕಿ 100 ಸಿಲಿಂಡರ್‌ ಕೂಡ ಖಾಲಿ ಆಗಿದ್ದವು. ಆಮ್ಲಜನಕ ಮುಗಿದು ಹೋಗುವ ಕಳವಳವನ್ನು ಸಿಬ್ಬಂದಿ ವ್ಯಕ್ತಪಡಿಸಿದ್ದರು. ಟ್ಯಾಂಕರ್‌ ಬರುವವರೆಗೂ ರೋಗಿಗಳಿಗೆ ಆಮ್ಲಜನಕ ಪೂರೈಸಲು ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಲು ಪರದಾಡಿದರು.

ಇದು ಕೋವಿಡ್‌ ವಾರ್ಡ್‌ಗಳಲ್ಲಿ ಆತಂಕ ಸೃಷ್ಟಿಸಿತು. ಅತಿ ಹೆಚ್ಚು ಪ್ರಮಾಣದ ಆಮ್ಲಜನಕದ ಅಗತ್ಯ ಇರುವ ರೋಗಿಗಳು ಏದುಸಿರು ಬಿಡಲಾರಂಭಿಸಿದರು. ದೂರವಾಣಿ ಮೂಲಕ ಸಂಬಂಧಿಕರಲ್ಲಿ ಕಳವಳ ವ್ಯಕ್ತಪಡಿಸಿದರು. ರೋಗಿಗಳ ಸಂಬಂಧಿಕರಲ್ಲಿ ಕೆಲವರು ವಾರ್ಡ್‌ ಪ್ರವೇಶಿಸಿ ಗಾಳಿ ಬೀಸಿದರು. ವೈದ್ಯಕೀಯ ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು