ಬುಧವಾರ, ಆಗಸ್ಟ್ 10, 2022
23 °C

ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಅವರ ಮೂರನೇ ಪುತ್ರಿ ಪಿ.ಗೌರಮ್ಮ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಅವರ ಮೂರನೇ ಪುತ್ರಿ ಪಿ.ಗೌರಮ್ಮ (85) ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾದರು.

ಇವರಿಗೆ ಇಬ್ಬರು ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಕೋವಿಡ್‌ನಿಂದ ಗುಣಮುಖರಾಗಿದ್ದ ಗೌರಮ್ಮ ಅವರು ವಯೋಸಹಜ ಅನಾರೋಗ್ಯಕ್ಕೆ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಎಸ್‌.ವಿ.ಪರಮೇಶ್ವರಪ್ಪ ಅವರನ್ನು ವಿವಾಹವಾಗಿದ್ದ ಗೌರಮ್ಮ ಅವರು ಬೆಂಗಳೂರಿನ ವಿದ್ಯಾರಣ್ಯಪುರಂನಲ್ಲಿ ನೆಲೆಸಿದ್ದರು. ಗೌರಮ್ಮ ಅವರ ಮೊಮ್ಮೊಗ ಸಿದ್ಧಾರ್ಥ್‌ (35) ಎರಡು ವಾರಗಳ ಹಿಂದೆಯಷ್ಟೇ ಕೋವಿಡ್‌ನಿಂದ ಮೃತಪಟ್ಟಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು