ಸಿರಿಗೆರೆ: ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 4 ವರ್ಷಗಳ ನಂತರ ಬುಧವಾರ ಸಂಜೆ ತರಳಬಾಳು ಮಠಕ್ಕೆ ಭೇಟಿ ನೀಡಿದರು.

ಅನ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುವ ಮಾರ್ಗಮಧ್ಯೆ ಮಠಕ್ಕೆ ಅವರು ಭೇಟಿ ನೀಡಿದ್ದರು. ಬೃಹನ್ಮಠದ ಆವರಣದಲ್ಲಿನ ಐಕ್ಯಮಂಟಪಕ್ಕೆ ತೆರಳಿದ ಸಾಣೇಹಳ್ಳಿ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

‘ಸಾಣೇಹಳ್ಳಿಯಲ್ಲಿ ನವೆಂಬರ್ ತಿಂಗಳಿನಲ್ಲಿ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ. ಅದರ ಸಮಾರೋಪ ಸಮಾರಂಭಕ್ಕೆ ತರಳಬಾಳು ಪೀಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ಆಹ್ವಾನಿಸುವ ದೃಷ್ಟಿಯಿಂದ ಸಿರಿಗೆರೆಗೆ ಬಂದಿದ್ದೇವೆ. ಶ್ರೀಗಳು ಅನ್ಯ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿರುವುದಾಗಿ ತಿಳಿಯಿತು’ ಎಂದು ಹೇಳಿದರು.

ಸಿರಿಗೆರೆ ಮತ್ತು ಸುತ್ತಲಿನ ಹಲವು ಭಕ್ತರು ಮಠಕ್ಕೆ ಬಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.