ಗುರುವಾರ , ಅಕ್ಟೋಬರ್ 22, 2020
22 °C
ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಮನವಿ

ಚಪ್ಪಾಳೆ, ಹೂಮಳೆ ಬೇಡ, ನ್ಯಾಯಯುತ ವೇತನ ನೀಡುವಂತೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಿರಿಯೂರು: ‘ಕೊರೊನಾ ವಾರಿಯರ್‌ಗಳಿಗೆ ಸರ್ಕಾರ ಹೆಲಿಕಾಪ್ಟರ್‌ನಲ್ಲಿ ಹೂವು ಸುರಿಸುವುದು ಬೇಡ, ಚಪ್ಪಾಳೆ ಹೊಡೆಸುವುದು ಬೇಡ. ನಮ್ಮ ಕೆಲಸಕ್ಕೆ ತಕ್ಕಂತೆ ನ್ಯಾಯಯುತ ವೇತನ ನೀಡಲಿ’ ಎಂದು ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಬುಧವಾರ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು.

‘ಆರೋಗ್ಯ ಇಲಾಖೆಯಲ್ಲಿ ಕಾಯಂ ನೌಕರರಿಗೆ ಸಿಗುತ್ತಿರುವ ಯಾವ ಸೌಲಭ್ಯಗಳೂ ನಮಗೆ ಸಿಗುತ್ತಿಲ್ಲ. ಐಸೊಲೇಷನ್ ವಾರ್ಡ್, ಪ್ರಯೋಗಾಲಯಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಮನಸ್ಸು ಮಾಡಬೇಕು’ ಎಂದು ಸಂಘದ ಕೆ.ಸಿ.ಸಾಕಮ್ಮ, ಟಿ.ಎಸ್. ಭಾಗ್ಯ, ಮಂಜುಳಾ ಮನವಿ ಮಾಡಿದರು.

ಭರವಸೆ: ‘ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆಗಳು ನ್ಯಾಯಯುತವಾಗಿವೆ. ಈ ಬಗ್ಗೆ ಆರೋಗ್ಯ ಸಚಿವರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜತೆ ಮಾತನಾಡುತ್ತೇನೆ’ ಎಂದು ಪೂರ್ಣಿಮಾ ಶ್ರೀನಿವಾಸ್ ಭರವಸೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ನೋಡಲ್ ಅಧಿಕಾರಿ ಡಾ.ರಂಗನಾಥ್, ಡಾ.ಸಂದೀಪ್, ವೃತ್ತ ನಿರೀಕ್ಷಕ ರಾಘವೇಂದ್ರ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಕಬಡ್ಡಿ ಶ್ರೀನಿವಾಸ್, ಅಸ್ಗರ್ ಅಹಮದ್, ಡಿ.ಗಂಗಾಧರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು