ಬಿಜೆಪಿ ಸಭೆ ನಾಳೆ
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಂಘಟನಾತ್ಮಕ ಸಭೆಯನ್ನು ಚಿತ್ರದುರ್ಗದ ಕಮ್ಮಾರೆಡ್ಡಿ ಸಮುದಾಯ ಭವನದಲ್ಲಿ ಜೂನ್ 22ರಂದು ಮಧ್ಯಾಹ್ನ 2.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ನಾರಾಯಣಸ್ವಾಮಿ ತಿಳಿಸಿದರು.
‘ಬಿ.ಎಸ್.ಯಡಿಯೂರಪ್ಪ ನೇತೃತ್ವದ ತಂಡ ಚಿತ್ರದುರ್ಗದಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಸಲಿದೆ. ಶಾಸಕರು, ಮಾಜಿ ಶಾಸಕರು ಸೇರಿ ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಚಿವ ಗೋವಿಂದ ಕಾರಜೋಳ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಪಾಲ್ಗೊಳ್ಳಲಿದ್ದಾರೆ’ ಎಂದು ಹೇಳಿದರು.