ಶುಕ್ರವಾರ, ಮೇ 7, 2021
19 °C

ಆಟದ ಮೈದಾನದ ವಿಚಾರ: ಘರ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳಮಡು (ಹಿರಿಯೂರು): ಚಳಮಡು ಗ್ರಾಮದಲ್ಲಿ ಸೋಮವಾರ ರಾತ್ರಿ ಯುಗಾದಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಟೂರ್ನಿ ನಡೆಸುವ ಮೈದಾನದ ವಿಚಾರಕ್ಕೆ ಒಂದೇ ಜನಾಂಗದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.

ಗ್ರಾಮದಲ್ಲಿ ತಿರುಮಲ ಕ್ರಿಕೆಟರ್ಸ್ ಹೆಸರಿನಲ್ಲಿ ಏ.14 ಮತ್ತು 15ರಂದು ‘ಚಳ್ಳಮಡು ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ’ ಆಯೋಜಿಸಲಾಗಿತ್ತು. ಕ್ರಿಕೆಟ್ ಆಡಿಸಲು ಕೆಲವರು ಉಳುಮೆ ಮಾಡಿಕೊಂಡಿದ್ದ ಸರ್ಕಾರಿ ಜಮೀನಿನನ್ನು ಬಿಟ್ಟುಕೊಡುವಂತೆ ಕೇಳಿದ್ದೇ ಗಲಭೆಗೆ ಮೂಲ ಎನ್ನಲಾಗಿದೆ.

ಗಲಭೆಯಲ್ಲಿ ಗಾಯಗೊಂಡವರನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಗೆ ಬಂದ ಮೇಲೂ ಆಸ್ಪತ್ರೆ ಆವರಣದಲ್ಲಿ ಎರಡು ಗುಂಪಿನವರು ಮತ್ತೆ ಕೈಕೈ ಮಿಲಾಯಿಸಿದ್ದಾರೆ. ಈ ಸಂಬಂಧ ಆಸ್ಪತ್ರೆಯ ಡಾ.ಅಶ್ವಿನಿ ಅವರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡೂ ಗುಂಪಿನವರು ದೂರು-ಪ್ರತಿದೂರು ಕೊಟ್ಟಿದ್ದು, ಗಲಭೆಗೆ ಸಂಬಂಧಿಸಿದ ಮೂರು ಪ್ರಕರಣಗಳು ದಾಖಲಾಗಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು