ಶುಕ್ರವಾರ, ನವೆಂಬರ್ 22, 2019
26 °C

ಶಾಂತಿ, ಸುವ್ಯವಸ್ಥೆ ಕಾಪಾಡಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ

Published:
Updated:
Prajavani

ಚಿತ್ರದುರ್ಗ: ಅಯೋಧ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವ ನಿರೀಕ್ಷೆ ಇದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.

ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭಕ್ಕೆ ಗುರುವಾರ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

'ತೀರ್ಪಿನ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡುವ ಅಗತ್ಯವಿಲ್ಲ. ತೀರ್ಪು ಪರ ಅಥವಾ ವಿರೋಧವೇ ಬರಲಿ ಜನರು ಶಾಂತ ರೀತಿಯಲ್ಲಿ ವರ್ತಿಸಬೇಕು' ಎಂದು ಹೇಳಿದರು.

ಹೊಸದುರ್ಗ ತಾಲ್ಲೂಕಿನ ನೀರಗುಂದ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಯಡಿಯೂರಪ್ಪ ಭೇಟಿ ಮಾಡಿದರು. ಈ ವೇಳೆ ಮಕ್ಕಳು 'ಡೆಸ್ಕ್ ಇಲ್ಲ ಸರ್' ಎಂದು ಕೂಗಿದ ಪ್ರಸಂಗವೂ ನಡೆಯಿತು.

ಪ್ರತಿಕ್ರಿಯಿಸಿ (+)