ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಕ್ಸೊ ಪ್ರಕರಣ: ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಜ್ವರ

Published 14 ಸೆಪ್ಟೆಂಬರ್ 2023, 16:01 IST
Last Updated 14 ಸೆಪ್ಟೆಂಬರ್ 2023, 16:01 IST
ಅಕ್ಷರ ಗಾತ್ರ

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಅನಾರೋಗ್ಯದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ಚಿಕಿತ್ಸೆ ಪಡೆದಿದ್ದಾರೆ.

ಶಿವಮೂರ್ತಿ ಶರಣರು ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮೂತ್ರ ಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ತೊಂದರೆಯುಂಟಾಗಿತ್ತು. ಈ ಕುರಿತು ಕಾರಾಗೃಹದ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಮಾಹಿತಿ ನೀಡಿದ್ದರು. ವೈದ್ಯರು ಕಾರಾಗೃಹಕ್ಕೆ ತೆರಳಿ ಆರೋಗ್ಯ ಪರಿಶೀಲಿಸಿದ್ದರು.

'ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಶರಣರನ್ನು ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು. ಸ್ಕ್ಯಾನಿಂಗ್ ಮಾಡಲಾಗಿದ್ದು, ಮೂತ್ರ ಕೋಶದಲ್ಲಿ ಯಾವುದೇ ತೊಂದರೆ ಕಾಣಿಸಿಕೊಂಡಿಲ್ಲ. ತಪಾಸಣೆಯ ಬಳಿಕ ಕಾರಾಗೃಹಕ್ಕೆ ಮರಳಿದರು' ಎಂದು ಜಿಲ್ಲಾ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT