ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಕ್ಸೊ ಪ್ರಕರಣ: ಚಿತ್ರದುರ್ಗ ಮುರುಘಾ ಶರಣರ ಬಿಡುಗಡೆಯ ಆದೇಶ ನ.15ಕ್ಕೆ ಮುಂದೂಡಿಕೆ

Published 10 ನವೆಂಬರ್ 2023, 11:04 IST
Last Updated 10 ನವೆಂಬರ್ 2023, 11:04 IST
ಅಕ್ಷರ ಗಾತ್ರ

ಚಿತ್ರದುರ್ಗ: ಪೋಕ್ಸೊ ಪ್ರಕರಣಕ್ಕೆ ಹೈಕೋರ್ಟ್ ನಲ್ಲಿ ಜಾಮೀನು ಪಡೆದಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವ ಆದೇಶವನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ.15ಕ್ಕೆ ಮುಂದೂಡಿದೆ.

ಜಾಮೀನು ಮಂಜೂರು ಮಾಡಿದ ಹೈಕೋರ್ಟ್ ಆದೇಶದ ಪ್ರತಿಯನ್ನು ಶರಣರ ಪರ ವಕೀಲರು ಶುಕ್ರವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹೈಕೋರ್ಟ್ ವಿಧಿಸಿದ ಷರತ್ತುಗಳ ಅನ್ವಯ ಇಬ್ಬರ ಭದ್ರತಾ ಖಾತರಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ಭದ್ರತಾ ಖಾತರಿ ಪರಿಶೀಲಿಸಿ ಬಿಡುಗಡೆ ಆದೇಶ ಪ್ರಕಟಿಸಲು ನ್ಯಾಯಾಲಯ ಬುಧವಾರಕ್ಕೆ ಸಮಯ ನಿಗದಿಪಡಿಸಿತು.

ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಾಡಿ ವಾರೆಂಟ್ ಮೇಲೆ ಶರಣರನ್ನು ವಿಚಾರಣೆ ನಡೆಸಿದ್ದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಕೋರಿಕೆ ಸಲ್ಲಿಸಿದರು. ಸರ್ಕಾರಿ ಪರ ವಕೀಲ ಜಗದೀಶ್ ಅವರು ಅರ್ಜಿಯೊಂದನ್ನು ನ್ಯಾಯಾಲಯದ ಮುಂದಿಟ್ಟರು. ಇದನ್ನು ನ.15ರಂದು ಪರಿಶೀಲನೆ ಮಾಡುವುದಾಗಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಪ್ರಕಟಿಸಿದರು.

'ಎರಡನೇ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ, ಈ ಪ್ರಕರಣದಲ್ಲಿ ಮತ್ತೊಮ್ಮೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಅಗತ್ಯವಿಲ್ಲ. ಒಂದೊಮ್ಮೆ ಹಾಗೇ ಮಾಡಿದರೆ ಅದು ನ್ಯಾಯಾಂಗ ನಿಂದನೆಯಾಗುತ್ತದೆ. ಮೊದಲ ಪ್ರಕರಣದಲ್ಲಿ ಜಾಮೀನು ಸಿಕ್ಕರೆ ಎರಡನೇ ಪ್ರಕರಣವನ್ನು ಪರಿಗಣಿಸುವಂತೆ ಇಲ್ಲ' ಎಂದು ಶರಣರ ಪರ ವಕೀಲ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT