ಹಿರಿಯೂರು: ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹೇಳಿದರು.

ನಗರದ ಗುರುಭವನದಲ್ಲಿ ಮಂಗಳವಾರ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಾರ್ವಜನಿಕ ಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಯೊಂದು ಗ್ರಾಮ, ವಾರ್ಡ್ ಮಟ್ಟದಲ್ಲಿ ಹೊಸ ಬೀಟ್ ವ್ಯವಸ್ಥೆ ಜಾರಿಗೆ ತಂದಿರುವ ಪ್ರಯುಕ್ತ ಸ್ಥಳೀಯ ಚಟುವಟಿಕೆಗಳ ಮೇಲೆ ನಿಗಾ ಇಡಲು ಸಾಧ್ಯವಾಗಿದೆ. ಸಾರ್ವಜನಿಕರು ಬೀಟ್ ಪೊಲೀಸರಿಗೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡಬೇಕು. ಸಾರ್ವಜನಿಕ ಸಂಪರ್ಕ ಸಭೆಗಳಲ್ಲಿ ವ್ಯಕ್ತವಾಗುವ ಅಭಿಪ್ರಾಯ, ಸಲಹೆಗಳನ್ನು ಕ್ರೋಢೀಕರಿಸಿ ಇಲಾಖೆಯಿಂದ ಪರಿಹಾರ ರೂಪಿಸಲಾಗುತ್ತದೆ’ ಎಂದು ಅವರು ಸ್ಪಷ್ಟಪಡಿಸಿದರು.

ಸೆನ್ ವಿಭಾಗದ ಡಿವೈಎಸ್ಪಿ ಈಶ್ವರನಾಯಕ್, ಹಿರಿಯೂರು ಉಪವಿಭಾಗದ ಡಿವೈಎಸ್ಪಿ ಟಿ.ಎಂ. ಶಿವಕುಮಾರ್ ಮಾತನಾಡಿದರು.

ವಿವಿಧ ಠಾಣೆಗಳ ಇನ್ಸ್ಪೆಕ್ಟರ್ಗಳಾದ ರಾಘವೇಂದ್ರ ಕಾಂಡಿಕೆ, ಆನಂದ್, ಗುಡ್ಡಪ್ಪ, ಸೆನ್ ಠಾಣೆಯ ಇನ್ಸ್ಪೆಕ್ಟರ್ ವೆಂಕಟೇಶ್ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.