ಪ್ರವಾಸೋದ್ಯಮ ಅಭಿವೃದ್ಧಿಗೆ ಪಿಪಿಪಿ ಮಾದರಿ- ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್

ಚಿತ್ರದುರ್ಗ: ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ರಾಜ್ಯದ ಪ್ರವಾಸಿತಾಣಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತಿಳಿಸಿದರು.
ಇಲ್ಲಿನ ಕಬೀರಾನಂದ ಆಶ್ರಮಕ್ಕೆ ಭೇಟಿ ನೀಡಿ ಶಿವಲಿಂಗಾನಂದ ಸ್ವಾಮೀಜಿ ಆಶೀರ್ವಾದ ಪಡೆದು ಅವರು ಮಾತನಾಡಿದರು.
ಪ್ರವಾಸೋದ್ಯಮ ಇಲಾಖೆಯಲ್ಲಿ ಪ್ರವಾಸಿತಾಣಗಳಿಗೆ ಮೂಲಸೌಲಭ್ಯ ಕಲ್ಪಿಸಬಹುದೇ ಹೊರತು ಪ್ರವಾಸಿಗರನ್ನು
ಆಕರ್ಷಿಸಲು ಸಾಧ್ಯವಿಲ್ಲ. ಹೂಡಿಕೆದಾರರನ್ನು ಆಕರ್ಷಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.
ಚಿತ್ರದುರ್ಗ ಐತಿಹಾಸಿಕ ಜಿಲ್ಲೆ. ವಿಜಯನಗರ ಸಾಮ್ರಾಜ್ಯದ ಭಾಗವಾಗಿ ಪಾಳೆಗಾರರು ಆಡಳಿತ ನಡೆಸುತ್ತಿದ್ದರು.
ಪ್ರವಾಸೋದ್ಯಮ ಸಚಿವ ಸ್ಥಾನದ ಹೊಣೆ ಹೊತ್ತ ತಕ್ಷಣವೇ ಇಲ್ಲಿಗೆ ಭೇಟಿ ನೀಡಬೇಕಿತ್ತು. ಕಾರಣಾಂತರ
ಗಳಿಂದ ಅದು ಸಾಧ್ಯವಾಗಿಲ್ಲ. ರೋಪ್ ವೇ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ಮಾಡಲಾಗುವುದು ಎಂದು
ಹೇಳಿದರು.
‘ಜ್ಯೋತಿರಾಜ್ ಅವರು ವಾಲ್ ಕ್ಲೈಂಬಿಂಗ್ ಮಾಡುವ ಮೂಲಕ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದಾರೆ. ಕಲ್ಲಿನ ಗೋಡೆ ಏರುವ ಮೂಲಕ ಜನರಿಗೆ ಮನೋರಂಜನೆ ನೀಡುತ್ತಿದ್ದಾರೆ. ಅವರಿಗೆ ನೆರವಾಗುವ ನಿಟ್ಟಿನಲ್ಲಿ ಅಲೋಚನೆ ಮಾಡಲಾಗುತ್ತಿದೆ. ನಾನು ಜ್ಯೋತಿರಾಜ್ ಅಭಿಮಾನಿ. ಅವರಿಗೆ ನೆರವು ನೀಡಲಾಗುವುದು’ ಎಂದು ಹೇಳಿದರು.
***
ಕೇಸರಿ ಶಾಲು ಮತ್ತು ಹಿಜಾಬ್ ವಿಚಾರ ಮುಂದಿಟ್ಟುಕೊಂಡು ವಿದ್ಯಾರ್ಥಿಗಳಲ್ಲಿ ಜಾತಿ ಬೀಜ ಬಿತ್ತುತ್ತಿರುವುದು ತಪ್ಪು. ಮಕ್ಕಳು ಅಮಾಯಕರು. ಅವರನ್ನು ದಿಕ್ಕು ತಪ್ಪಿಸುವುದು ಸರಿಯಲ್ಲ.
ಆನಂದ್ ಸಿಂಗ್, ಪ್ರವಾಸೋದ್ಯಮ ಸಚಿವ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.