ಚಿತ್ರದುರ್ಗ: ಬಿಜೆಪಿಯ ಎ.ನಾರಾಯಣಸ್ವಾಮಿಗೆ ಭರ್ಜರಿ ಗೆಲುವು

ಸೋಮವಾರ, ಜೂನ್ 17, 2019
22 °C

ಚಿತ್ರದುರ್ಗ: ಬಿಜೆಪಿಯ ಎ.ನಾರಾಯಣಸ್ವಾಮಿಗೆ ಭರ್ಜರಿ ಗೆಲುವು

Published:
Updated:

ಚಿತ್ರದುರ್ಗ: ಲೋಕಸಭಾ ಚುನಾವಣೆಯ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಅವರು 80,178 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇವಿಎಂ ಮತ ಎಣಿಕೆ ಹಾಗೂ ವಿ.ವಿ.ಪ್ಯಾಟ್‌ ಮತಗಳ ತಾಳೆ ಹಾಕುವ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಚುನಾವಣಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಅವರು ಅಭ್ಯರ್ಥಿಯ ಗೆಲುವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಬಿಜೆಪಿಯ ನಾರಾಯಣಸ್ವಾಮಿ ಅವರು 6,26,195 ಮತಗಳನ್ನು ಗಳಿಸಿ ಗೆಲುವಿನ ನಗೆ ಬೀರಿದರು. ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ 5,46,017 ಮತಗಳನ್ನು ಗಳಿಸಿ ಪರಾಭವಗೊಂಡರು. ಸಂಸದರಾಗಿದ್ದ ಚಂದ್ರಪ್ಪ ಪುನರಾಯ್ಕೆ ಬಯಸಿ ಕಣಕ್ಕೆ ಇಳಿದಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !