ಚಿತ್ರದುರ್ಗ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ನ ‘ಭೂಮಿಕಾ ಕ್ಲಬ್’ ವೇದಿಕೆಯು ನಗರದಲ್ಲಿ ಮಾ.7ರಂದು ಶನಿವಾರ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

ಫ್ರೀಡಂ ಆಯಿಲ್ ಸಹಯೋಗ, ಇಂಡಿಯಾನ–ಎಸ್ಜೆಎಂ ಹಾರ್ಟ್ ಸೆಂಟರ್ ಸಹ ಸಹಯೋಗದಲ್ಲಿ ಬಿ.ಡಿ. ರಸ್ತೆಯ ಸರ್ಕಾರಿ ಕಲಾ ಕಾಲೇಜಿನ (ಸ್ವಾಯತ್ತ) ಡಾ.ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಅಂದು ಮಧ್ಯಾಹ್ನ 2.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ದೇವರಾಜ್ ಅರಸು ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಎಂ.ಸಿ. ಯಶಸ್ವಿನಿ ಕಾರ್ಯಕ್ರಮ ಉದ್ಘಾಟಿಸುವರು. ಧಾರಾವಾಹಿ ನಟಿ, ಬಿಗ್ಬಾಸ್ ಖ್ಯಾತಿಯ ಸ್ಪಂದನಾ ಸೋಮಣ್ಣ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಂಗೀತ, ನೃತ್ಯ, ಆಟೋಟ, ರಸಪ್ರಶ್ನೆ, ಅಡುಗೆ ಸ್ಪರ್ಧೆಗಳ ಮೂಲಕ ಕಾರ್ಯಕ್ರಮ ಗಮನ ಸೆಳೆಯಲಿದೆ. ಸಮೃದ್ಧಿ ಮಹಿಳಾ ಸಂಘದ ಸದಸ್ಯೆಯರು ಸಾಂಪ್ರದಾಯಿಕ ಫ್ಯಾಷನ್ ಶೋ ನಡೆಸಿಕೊಡಲಿದ್ದಾರೆ. ಹೇಮಾ ಅವರು ಭಾವಗೀತೆ, ಚಿತ್ರಗೀತೆಗಳನ್ನು ಹಾಡಿ ರಂಜಿಸಲಿದ್ದಾರೆ. ತನ್ವಿ ಅವರು ನೃತ್ಯ ಕಾರ್ಯಕ್ರಮ ನೀಡುವರು.

‘ಮಹಿಳೆಯರಲ್ಲಿ ಹೃದಯಾಘಾತ’ ವಿಷಯ ಕುರಿತು ಇಂಡಿಯಾನ– ಎಸ್ಜೆಎಂ ಹಾರ್ಟ್ ಸೆಂಟರ್ನ ಹೃದ್ರೋಗ ತಜ್ಞ ಡಾ.ಆರ್.ಎಸ್. ಕಾರ್ತಿಕ್ ಉಪನ್ಯಾಸ ನೀಡುವರು. ‘ಮಹಿಳೆಯರ ಸ್ವಯಂ ಉದ್ಯೋಗ’ ಕುರಿತು ರುಡ್ಸೆಟ್ ಸಂಸ್ಥೆ ನಿರ್ದೇಶಕ ಎ.ಎಚ್.ಟಿ. ಬಸವರಾಜ್ ಮಾತನಾಡುವರು. ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕಿಯರು, ಉಪನ್ಯಾಸಕಿಯರು ಅತಿಥಿಗಳಾಗಿ ಪಾಲ್ಗೊಳ್ಳುವರು.

ಹೊಸ ವಿಷಯಗಳನ್ನು ಕಲಿಯಲು, ಸಮಾನ ಮನಸ್ಕರೊಂದಿಗೆ ಬೆರೆಯಲು, ಸೃಜನಶೀಲತೆ ಪ್ರದರ್ಶಿಸಲು, ಆರೋಗ್ಯ ಮತ್ತು ಕ್ಷೇಮದ ಜಗತ್ತಿನ ಬಗ್ಗೆ ಮಾಹಿತಿ ಪಡೆಯಲು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರಿಗೆ ಅಚ್ಚರಿಯ ಉಡುಗೊರೆ ಗೆಲ್ಲುವ ಅವಕಾಶವೂ ಇರಲಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಹೆಸರು ನೋಂದಾಯಿಸಿ ಕೊಳ್ಳಬಹುದು. ಸ್ಥಳದಲ್ಲೂ ನೋಂದಣಿ ಸೌಲಭ್ಯ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.