ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ ರಾಷ್ಟ್ರ ಕಟ್ಟಲು ಸಿದ್ಧತೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Last Updated 17 ಸೆಪ್ಟೆಂಬರ್ 2021, 12:22 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಹಾಗೂ ಬಿಜೆಪಿ ಹಿಂದೂ ರಾಷ್ಟ್ರ ಕಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿವೆ. ಹಾಗಂತ ಬೇರೆ ಧರ್ಮವನ್ನು ವಿರೋಧಿಸುವುದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಡೋಂಗಿ ರಾಜಕಾರಣ ಮಾಡುವುದಿಲ್ಲ. ಇಂದು ಇಲ್ಲವೇ ನಾಳೆ ಹಿಂದೂ ರಾಷ್ಟ್ರ ಕಟ್ಟುತ್ತೇವೆ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಕೆಲಸ ಮಾಡುವುದಿಲ್ಲ’ ಎಂದರು.

‘ಧಾರ್ಮಿಕ ಮಂದಿರಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶ ಪಾಲನೆ ಮಾಡುವುದು ಸರ್ಕಾರದ ಕರ್ತವ್ಯ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಅತ್ಯುನ್ನತ ಅಧಿಕಾರವಿದೆ. ನಂಜನಗೂಡು ದೇಗುಲ ಧ್ವಂಸ ಗೊತ್ತಿಲ್ಲದೆಯೂ ಆಗಿರಬಹುದು. ಈ ಬಗ್ಗೆ ಚರ್ಚೆ ನಡೆಸಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ನ್ಯಾಯಾಲಯದ ಆದೇಶದಲ್ಲಿ ಲೋಪವಿದ್ದರೆ ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಇದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT