ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಕುಟುಂಬ ಪ್ರೇಮದಿಂದ ಹಿರಿಯರ ಮೂಲೆ ಗುಂಪು: ಕೆ.ಮುಕುಡಪ್ಪ

Published 22 ಏಪ್ರಿಲ್ 2024, 14:14 IST
Last Updated 22 ಏಪ್ರಿಲ್ 2024, 14:14 IST
ಅಕ್ಷರ ಗಾತ್ರ

ಹಿರಿಯೂರು: ‘ಕುಟುಂಬ ಪ್ರೇಮದಿಂದ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಕಟ್ಟಿದ ಹಿರಿಯ ನಾಯಕರನ್ನು ಮೂಲೆ ಗುಂಪು ಮಾಡಿದ್ದಾರೆ’ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕೆ.ಮುಕುಡಪ್ಪ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಡಿ.ಎಸ್.ಸದಾನಂದಗೌಡ, ಸಿ.ಟಿ.ರವಿ ಮೊದಲಾದ ಹಿರಿಯ ಬಿಜೆಪಿ ನಾಯಕರನ್ನು ವ್ಯವಸ್ಥಿತ ಸಂಚಿನ ಮೂಲಕ ಸಂಪೂರ್ಣ ಮೂಲೆ ಗುಂಪಾಗಿಸಿದ್ದಾರೆ’ ಎಂದು ಆಪಾದಿಸಿದರು.

‘ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ನಮ್ಮ ಆಸೆ. ಆದರೆ, ರಾಜ್ಯದಲ್ಲಿ ಪಕ್ಷವನ್ನು ಮೂಲೆ ಗುಂಪು ಮಾಡಲು ಅಪ್ಪ, ಮಕ್ಕಳು ಪ್ರಯತ್ನಿಸುತ್ತಿದ್ದಾರೆ’ ಎಂದರು.

‘ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕುರುಬ ಸಮುದಾಯವಿದ್ದರೂ ಬಿಜೆಪಿಯಲ್ಲಿ ಟಿಕೆಟ್ ಕೊಡದೇ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.

ಮುಖಂಡರಾದ ಶಾಂತಕುಮಾರ್, ಪಗಲಬಂಡೆ ಪ್ರದೀಪ್, ಪರಮೇಶ್, ಕೇಶವ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT